ಬೆಳ್ತಂಗಡಿ : ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ, ಮೇ. 05 : ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಲಾಯಿಲ ಗ್ರಾಮದ ಸವಣಾಲು – ಕರ್ನೊಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಬೆಳಕಿಗೆ ಬಂದಿದೆ.

ಅರೆ ಬೆತ್ತಲೆ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಮೇ 5 ರಂದು ಸಂಜೆ ಪತ್ತೆಯಾಗಿದೆ.

ಸ್ಥಳೀಯ ನಿವಾಸಿಯೋರ್ವರಿಗೆ ದುರ್ವಾಸನೆ ಬಂದಿದ್ದರಿಂದ ಗುಡ್ಡಕ್ಕೆ ಹೋಗಿ ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ಮರವೊಂದರಲ್ಲಿ ನೇಣು ಬಿಗಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮತ್ತು ಸೋಕೋ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಮೃತನ ಅಂದಾಜು ಸುಮಾರು 45 ರಿಂದ 50 ವರ್ಷ ವಯಸ್ಸಿನ ವ್ಯಕ್ತಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಶವ ಸಂಪೂರ್ಣ ಕೊಳೆತಿದ್ದು ಸುಮಾರು ಒಂದು ವಾರಗಳ ಹಿಂದೆ ಘಟನೆ ನಡೆದಿರಬಹುದು ಎಂದು ಸಂಶಯಿಸಲಾಗಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.