ಮೂಡುಬಿದಿರೆ: 7 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Advertisement

ಮೂಡುಬಿದಿರೆ, ಸೆ. 07 : ಸುಮಾರು 7ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ತಿರುಪ್ಪುರ ಜಿಲ್ಲೆಯ ತಿರುಪ್ಪುರ ಗ್ರಾಮದ ಶಾಸ್ತ್ರಿ ಸ್ಟೀಟ್‌ ನಿವಾಸಿ ನಾಗರಾಜನ್ (38) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

ಆರೋಪಿಯ ವಿರುದ್ಧ 2018ರಲ್ಲಿ ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ದೈವಸ್ಥಾನದಲ್ಲಿ ಕಳವುಗೈದಿರುವ ಆರೋಪ ವಿದ್ದು, ಈತನ ಕಳೆದ 7ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಈತನ ಬಂಧನಕ್ಕಾಗಿ ಮೂಡುಬಿದಿರೆ ಹಿರಿಯ ಸಿಜೆ ಆ್ಯಂಡ್ ಜೆ.ಎಂ.ಎಫ್.ಸಿ ನ್ಯಾಯಾಲಯ ದಸ್ತಗಿರಿ ವಾರಂಟ್, ಪ್ರೋಕ್ಲಮೇಷನ್ ಹೊರಡಿಸಿತ್ತು.

Advertisement

ಈ ಹಿನ್ನೆಲೆ ಆರೋಪಿಯ ಬಂಧನಕ್ಕಾಗಿ ಕಾರ್ಯಾಚರಣೆ ಆರಂಭಿಸಿದ್ದ ಪೊಲೀಸರು ತಮಿಳುನಾಡು ಜಿಲ್ಲೆಯ ತಿರುಪ್ಪುರ ಜಿಲ್ಲೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ