ಮುಂಡಾಜೆ : ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ವಿಶ್ವ ಶಾಂತಿಗೆ ಸಾಮೂಹಿಕ ಪ್ರಾರ್ಥನೆ – ಬಕ್ರೀದ್ ಸಂದೇಶ ಕಾರ್ಯಕ್ರಮ

ಬೆಳ್ತಂಗಡಿ, ಮೇ 29 : ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಮುಂಡಾಜೆ ಇಲ್ಲಿ ಬಕ್ರೀದ್ ಪ್ರಯುಕ್ತ ವಿಶ್ವ ಶಾಂತಿಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಪ್ರಧಾನ ಧರ್ಮಗುರು ಸಿರಾಜುದ್ದೀನ್ ಸ‌ಅದಿ ಗಡಿಯಾರ್ ನೇತೃತ್ವದಲ್ಲಿ ಖುತುಬಾ ಪಾರಾಯಣ ಹಾಗೂ ಬಕ್ರೀದ್ ಸುನ್ನತ್ ನಮಾಝ್ ನಡೆಯಿತು.

Advertisement

ಸಹಾಯಕ ಧರ್ಮಗುರು ತ್ವಾಹಿರ್ ಸ‌ಅದಿ ನಾವೂರು ತಕ್ಬೀರ್ ಗೆ ನೇತೃತ್ವ ನೀಡಿದರು.

ಮಸ್ಜಿದ್ ಅಧ್ಯಕ್ಷ ಅಬ್ದುಲ್‌ ಬಶೀರ್ ಬಶೀರ್ ನೆಕ್ಕರೆ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಇಸ್ಮಾಯಿಲ್ ಕುರುಡ್ಯ, ಕೋಶಾಧಿಕಾರಿ ಅಬ್ದುಲ್ಲ ಹಾಜಿ ರೋಝ, ಉಪಾಧ್ಯಕ್ಷ ಕೆರೀಂ ಕೆ.ಎಸ್, ಜೊತೆ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ, ಹಾಗೂ ಜಮಾಅತ್ ಕಮಿಟಿ, ಎಸ್‌ವೈಎಸ್, ಎಸ್ಸೆಸ್ಸೆಫ್, ಕರ್ನಾಟಕ ಮುಸ್ಲಿಂ ಜಮಾಅತ್ ಪದಾಧಿಕಾರಿಗಳು, ಹಿರಿಯ ಕಿರಿಯ ಸದಸ್ಯರು ಭಾಗವಹಿಸಿದ್ದರು.

ಜಮಾಅತ್ ನಿಂದ ಮರಣ ಹೊಂದಿದ ವ್ಯಕ್ತಿಗಳ ಸ್ಮರಣೆಯಲ್ಲಿ ಯಾಸೀನ್ ಹದಿಯ ಮಾಡಲಾಯಿತು. ಬಳಿಕ ಸಿಹಿ ತಿಂಡಿ ವಿತರಿಸಲಾಯಿತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.