ಬಂಟ್ವಾಳ : ಒನ್ ವೇ ಲವ್ – ಯುವತಿಯ ಬರ್ಬರ ಹತ್ಯೆ : ಕೊಲೆ ಆರೋಪಿ ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಯುವಕ ?

Advertisement

ಬಂಟ್ವಾಳ, ಜು. 16 : ಹಾಡಹಗಲೇ ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ ಪ್ರಕರಣ ಸಂಬಂಧ ಮಹತ್ತರ ಮಾಹಿತಿ ಲಭ್ಯವಾಗಿದೆ.

ಬಂಟ್ವಾಳ ತಾಲೂಕಿನ ಕಕ್ಕೆಪದವು ನಿವಾಸಿ ಬಾಲಕೃಷ್ಣ ಗೌಡ ಮಗಳು ಲಾವಣ್ಯ(25) ಸಾವನ್ನಪ್ಪಿದವಳು. ಬಿ. ಸಿ. ರೋಡ್ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಕಕ್ಕೆಪದವು ಮಾರ್ಗವಾಗಿ ಸಂಚಾರಿಸುವ ಸರ್ಕಾರಿ ಬಸ್ಸಿನೊಳಗೆ ಯುವತಿ ಕುಳಿತಿದ್ದಳು. ಈ ವೇಳೆ ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಯುವಕ, ಬಸ್ಸಿನೊಳಗೆ ನುಗ್ಗಿ ಯುವತಿಯನ್ನು ಬಲವಂತವಾಗಿ ಕೆಳಗಿಳಿಸಿದ್ದಾನೆ. ಬಳಿಕ ಸಾರ್ವಜನಿಕರ ಸಮ್ಮುಖದಲ್ಲೇ ಕತ್ತಿಯಿಂದ ಆಕೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ರೂ ಫಲಿಸದೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಪೊಲೀಸ್ ಮಾಹಿತಿ ಪ್ರಕಾರ ಕೊಲೆ ಮಾಡಿದ ಯುವಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಚೇತನ್ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ. ಈತ ಕೊಲೆಯಾದ ಯುವತಿಯ ದೂರದ ಸಂಬಂಧಿಯಾಗಿದ್ದು ಹಾಗೂ ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎಂದು ಮಾಹಿತಿ ಲಭಿಸಿದೆ.

ಘಟನೆ :

ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್‌ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ಜು.16 ರಂದು ಸಂಜೆ ಸಂಭವಿಸಿದೆ. ಈ ಬಗ್ಗೆ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕೊಲೆ ಮಾಡಿದ ಯುವಕನ ಮಾಹಿತಿಯನ್ನು ಪೊಲೀಸರು ಪತ್ತೆ ಹಚ್ಚಿ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ