ಪುತ್ತೂರು: ಪತ್ನಿಯ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ಪ್ರಾಣಾಪಾಯದಿಂದ ಪಾರು

Advertisement

ಪುತ್ತೂರು, ಮಾ. 23 : ಪತ್ನಿಯನ್ನು ಕೊಲೆಗೈದು, ಬಳಿಕ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ. ಕಳೆದ ಶುಕ್ರವಾರದಂದು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಘಟನೆ ನಡೆದಿತ್ತು.

Advertisement

ಆರೋಪಿ ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂಬಾತ ಘಟನೆಯ ನಂತರ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದನು. ಪ್ರಸ್ತುತ ಆತ ಚೇತರಿಸಿಕೊಳ್ಳುತ್ತಿದ್ದು, ಅಪಾಯದಿಂದ ಹೊರಬಂದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisement

ಆರೋಪಿ ಬೈರಪ್ಪ ತನ್ನ ಪತ್ನಿ ಸಾವಿತ್ರಿಯನ್ನು ಚಾಕುವಿನಿಂದ ಬೆನ್ನಟ್ಟಿ ಇರಿದು ಕೊಂದಿದ್ದನು. ನಂತರ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು. ಪ್ರಸ್ತುತ ಆತನ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಈ ಮಧ್ಯೆ, ಸಾವಿತ್ರಿಯ ತಂದೆ ಕುಮಾರಮಂಗಲದ ಟಿಪ್ಪ ಎಂಬುವವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೈರಪ್ಪ ತನ್ನ ಪತ್ನಿಯ ನಡತೆಯ ಮೇಲೆ ಶಂಕೆ ವ್ಯಕ್ತಪಡಿಸಿ ಈ ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ