ಬಾಗಲಕೋಟೆ : ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಬಂಧನ

Advertisement

ಬಾಗಲಕೋಟೆ, ಡಿ. 17 : ಆರ್ಕೆಸ್ಟ್ರಾ ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಉತ್ತರ ಕರ್ನಾಟಕ ಭಾಗದ ಖ್ಯಾತ ಯೂಟ್ಯೂಬರ್ ಹಾಗೂ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿಯ ಬಂಧನವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ ಸೇರಿ 6 ಜನ ಸಹಚರರ ಮೇಲೆ ಪೋಕ್ಸೋ ಕೇಸ್‌ ದಾಖಲಾಗಿದೆ.

Advertisement

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

Advertisement

ಅ.24ರಂದು ಬೆಳಗಾವಿ ಜಿಲ್ಲೆಯ ಒಂದು ಗ್ರಾಮದಲ್ಲಿ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಬಂದಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ನೃತ್ಯ ಮಾಡಲು ಅಪ್ರಾಪ್ತ ಬಾಲಕಿ ಸಹ ನೃತ್ಯ ಪ್ರದರ್ಶನಕ್ಕಾಗಿ ಬಂದಿದ್ದಾಳೆ. ಕಾರ್ಯಕ್ರಮ ಮುಗಿದ ಬಳಿಕ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ವಿಡಿಯೋ ಮಾಡಿಕೊಂಡು, ಆತನ 6 ಜನ ಸಹಚರರು ಒಂದು ವೇಳೆ ಈ ಘಟನೆ ಬಗ್ಗೆ ಎಲ್ಲಿಯೂ ಬಾಯಿ ಬಿಡದಂತೆ ಬೆದರಿಕೆ ಹಾಕಿದ್ದಾರೆಂದು ಬಾಲಕಿ ಗಂಭೀರ ಆರೋಪ ಮಾಡಿದ್ದಾಳೆ.

ಪೋಕ್ಸೋ ಕೇಸ್‌ ದಾಖಲು

ಆದರೆ ಈ ಘಟನೆ ಬಳಿಕ ಡಿ.14 ರಂದು ಬಾಲಕಿ ಬೆಳಗಾವಿಯ ಚಿಕ್ಕೋಡಿ ಪೊಲೀಸ್‌ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾಳೆ. ಈ ಕುರಿತು ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಂತರ ಡಿ.15 ರಂದು ಬಾಗಲಕೋಟೆಯ ಮಹಾಲಿಂಗಪುರ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ. ಈಗ ಮಹಾಲಿಂಗಪುರ ಠಾಣೆಯಲ್ಲಿ ಮ್ಯೂಸಿಕ್ ಮೈಲಾರಿ ಮತ್ತು ಇತರ ಆರು ಮಂದಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

ಮ್ಯೂಸಿಕ್‌ ಮೈಲಾರಿ ಬಂಧನ

ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಬಾಗಲಕೋಟೆ ಪೊಲೀಸರು ಈಗಾಗಲೇ ಮ್ಯೂಸಿಕ್‌ ಮೈಲಾರಿಯನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಎಸ್ ಪಿ ಸಿದ್ದಾರ್ಥ ಗೋಯಲ್ ಖಚಿತಪಡಿಸಿದ್ದಾರೆ. ಇನ್ನೂ ಉಳಿದ ಆರು ಜನರ ಬಂಧನವಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ