ಮೈಸೂರು, ಡಿ. 11 : ಮೈಸೂರು ಅರಮನೆಯ ಮುಖ್ಯದ್ವಾರದ ಮೇಲ್ಚಾವಣಿಯ ಒಂದು ಭಾಗ ಕುಸಿತವಾಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಮೇಲ್ಛಾವಣಿ ಕುಸಿಯುವ ಸಂದರ್ಭದಲ್ಲಿ ಯಾರೂ ಇಲ್ಲದೇ ಇದ್ದಿದ್ದರಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಅರಮನೆಯ ವರಾಹ ಗೇಟ್ ಮುಖ್ಯದ್ವಾರದ ಮೇಲ್ಚಾವಣಿಯ ಒಂದು ಭಾಗ ಸ್ವಲ್ಪ ಪ್ರಮಾಣದಲ್ಲಿ ಕುಸಿದುಬಿದ್ದಿದೆ. ಸಿಬ್ಬಂದಿ ನಿಲ್ಲಿಸಿದ್ದ ಬೈಕ್ ಮೇಲೆಯೇ ಬಿದ್ದಿದೆ. ಜನರು ಇಲ್ಲದ ವೇಳೆ ಕುಸಿದಿದ್ದರಿಂದ ಅನಾಹುತ ತಪ್ಪಿದೆ. ಘಟನೆ ಬಳಿಕ ಗೇಟ್ ಬಳಿ ಸಿಬ್ಬಂದಿ ಬ್ಯಾರಿಕೇಡ್ ಅಳವಡಿಸಿದ್ದಾರೆ. ಸದ್ಯ ಕುಸಿತವಾದ ಭಾಗದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ಪ್ರವೇಶ ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.

