ಮಂಗಳೂರು : ಅರಣ್ಯ ಇಲಾಖೆ ಬೋನು ಇಟ್ಟಿದ್ದು ಚಿರತೆಗಾಗಿ, ಬೋನಿನಲ್ಲಿ ಸೆರೆಯಾಗಿದ್ದು ಮಾತ್ರ ನಾಯಿ !

Advertisement

ಮಂಗಳೂರು, ಫೆ. 27 : ನಗರದಲ್ಲಿ ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಚಿರತೆಯ ಹಾವಳಿಯ ಮಧ್ಯೆಯೇ ಚಿರತೆ ಯನ್ನು ಸೆರೆ ಹಿಡಿಯಲು ಇರಿಸಿದ್ದ ಬೋನಿಗೆ ನಾಯಿ ಬಿದ್ದ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ನಗರದ ಕದ್ರಿ ಕೈಬಟ್ಟಲು ಡಾಕ್ಟರ್ಸ್ ಲೇನ್ ಬಳಿ ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಚಿರತೆಯ ಓಡಾಟ ಕಂಡುಬಂದಿತ್ತು. ಅದನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯ ಸಿಬ್ಬಂದಿ ಬುಧವಾರ ನಾಗಬನದ ಬಳಿ ಬೋನು ಇರಿಸಿದ್ದರು. ಗುರುವಾರ ಬೆಳಗ್ಗೆ ಆ ಬೋನಿನಲ್ಲಿ ನಾಯಿ ಸೆರೆಯಾಗಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ನಾಯಿಯನ್ನು ಬೋನಿನಿಂದ ಹೊರಗೆ ತೆಗೆದಿದ್ದಾರೆ.

ಡಾಕ್ಟರ್ಸ್‌ ಲೇನ್‌ನಲ್ಲಿ ಎರಡು ದಿನ ರಾತ್ರಿ ವೇಳೆ ಪತ್ತೆಯಾಗಿದ್ದ ಚಿರತೆಯು ಬುಧವಾರ ರಾತ್ರಿ ಪತ್ತೆಯಾದ ಬಗ್ಗೆ ವರದಿಯಾಗಿಲ್ಲ. ಹಾಗಾಗಿ ಚಿರತೆಯ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಲಾಗಿದೆ. ಗುರುವಾರವೂ ನಾಗಬನದ ಬಳಿ ಬೋನು ಇಡಲಾಗಿದೆ. ಇಲಾಖೆಯ ಸಿಬ್ಬಂದಿ ವರ್ಗವು ನಿಗಾ ವಹಿಸಿದೆ. ಈ ಮಧ್ಯೆ ನಗರದ ಪಂಪ್‌ವೆಲ್ ಬಳಿ ಕೂಡ ಚಿರತೆ ಓಡಾಡಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅದು ದೃಢಪಟ್ಟಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

*ಮಂಗಳೂರು (ಬಜೈ)ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಮಾಹಿತಿ ಇದೆ. ಅದರಂತೆ ಕೆಂಜಾರಿನ ತಾರಾಬರಿಯ ಗದ್ದೆ ಪ್ರದೇಶದಲ್ಲಿ ಬೋನು ಇರಿಸಿದೆ. ವಿಮಾನ ನಿಲ್ದಾಣದ ಪರಿಸರದಲ್ಲಿ ನಿರಂತರವಾಗಿ ಬೋನುಗಳನ್ನು ಇಡಲಾಗುತ್ತವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ