ಉಜಿರೆ : ಇಂದು ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ  ಕುಮಾರ ದರ್ಶನ, “ನಡ್ವಾಲ್ ಸಿರಿಜಾತ್ರೆ”

ನಿಡಿಗಲ್, ಏ. 02 : ತುಳುನಾಡಿನ ಸತ್ಯನಾಪುರದ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಇಂದು ರಾತ್ರಿ ಗಂಟೆ 8 ಗಂಟೆಯಿಂದ ಕುಮಾರ ದರ್ಶನ, ದೇವರ ಉತ್ಸವ, ಕಟ್ಟೆಪೂಜೆ “ವಾರ್ಷಿಕ ನಡ್ವಾಲ್ ಸಿರಿಜಾತ್ರೆ” ನಡೆಯಲಿದೆ.

Advertisement

ಇಂದು ಬೆಳಗ್ಗಿನಿಂದ ಗಣಹೋಮ, ರುದ್ರಾಭಿಷೇಕ, ಮಹಾಪೂಜೆ ಸೇರಿದಂತೆ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು. ವೇದಮೂರ್ತಿ ನಾಗಪಾತ್ರಿ ಶ್ರೀ ಸುಬ್ರಹ್ಮಣ್ಯ ಮಧ್ಯಸ್ಥ ಇವರ ನೇತೃತ್ವದಲ್ಲಿ ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ ಹಾಗೂ ಶ್ರೀ ದೇವರ ಉತ್ಸವ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ ನಡೆಯಿತು.

ರಾತ್ರಿ ಗಂಟೆ 8 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀಧಾಮ, ಮಾಣಿಲ  ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.