ಬೆಂಗಳೂರು : ನಾಗರಬಾವಿಯ ಖಾಸಗಿ ಹೋಟೆಲ್‌ನಲ್ಲಿ ಅಗ್ನಿ ಅವಘಡ – ಓರ್ವ ಸಿಬ್ಬಂದಿ ಸಾವು, 4 ಜನರಿಗೆ ಗಂಭೀರ ಗಾಯ

ಬೆಂಗಳೂರು, ಮೇ. 09 : ನಾಗರಬಾವಿಯ ರಿಂಗ್ ರೋಡ್ ಬಳಿಯ ಸರ್ವೀಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ಯೊಂದರಲ್ಲಿ ಅಗ್ನಿ ಅವಘಡ ಸಂಭವಸಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, 4 ಜನ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೋಟೆಲ್‌ ನಲ್ಲಿ ತಡರಾತ್ರಿ ಕಾಣಿಸಿಕೊಂಡ ಬೆಂಕಿ
ನಾಗರಬಾವಿಯ ರಿಂಗ್‌ ರೋಡ್ ಬಳಿಯ ಸರ್ವೀಸ್‌ ರೋಡ್‌ನಲ್ಲಿರುವ ಶಾಸಗಿ ಹೋಟೆಲ್‌ ನಲ್ಲಿ ಶುಕ್ರವಾರ(ಮೇ.8) ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಅಲ್ಲೇ ಕೆಲಸ ಮಾಡುತ್ತಿದ್ದ 8 ಮಂದಿ ಹೋಟೆಲ್‌ ಮಂದಿ ಸಿಬ್ಬಂದಿಗಳು ವಾಸವಿದ್ದ ಹೋಟೆಲ್‌ ಕಟ್ಟಡದ ಮೇಲಿನ ಮಹಡಿಗೂ ಬೆಂಕಿ ಹಬ್ಬಿದ್ದು, ಇದರಿಂದ ಪರಾಗಲು ಅಲ್ಲಿಂದ ಕೆಳಗೆ ಇಳಿಯಲು ಈ ಸಿಬ್ಬಂದಿಗಳು ಪ್ರಯತ್ನ ನಡೆಸಿದ್ದಾರೆ. ಆದರೆ, ಅಷ್ಟರಲ್ಲಿ ಬೆಂಕಿ ಮಹಡಿಯಲ್ಲಿ ಆವರಿಸಿಕೊಂಡಿದ್ದು, ದಟ್ಟ ಹೊಗೆಯಿಂದಾಗಿ 5 ಜನರು ಗಂಭೀರವಾಗಿ ಗಾಯಗೊಂಡಿದ್ದು, 3 ಜನ ಪಾರಾಗಿದ್ದಾರೆ.

ಅಗ್ನಿ ಅವಘಡಕ್ಕೆ ಓರ್ವ ಸಿಬ್ಬಂದಿ ಬಲಿ

ಘಟನೆ ತಿಳಿದ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದು, ಭೀಮಾ, ಶಿವಾನಂದ, ಸತೀಶ್‌, ರಾಜಕುಮಾರ್‌ ಸೇರಿದಂತೆ ಐವರು ಗಾಯಾಳುಗಳನ್ನು ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 45 ವರ್ಷದ ರಾಜಕುಮಾರ್‌ ಎಂಬಾತ ಸಾವನ್ನಪ್ಪಿದ್ದಾರೆ. ಇನ್ನು, ಉಳಿದ 4 ಜನ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಶಂಕೆ
ಸದ್ಯ, ಈ ಕುರಿತು ತನಿಖೆ ನಡೆಯುತ್ತಿದ್ದು, ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತದ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ತಾಲೂಕು, ಬೆಳ್ತಂಗಡಿ

ಮುಂಡಾಜೆ : ನಿವೃತ್ತ ಶಿಕ್ಷಕ ಶಂಕರ್ ತಾಮನ್ಕರ್ ರಿಂದ ಮಾದರಿ ಸೇವೆ – ತಂದೆ ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಭಾರೀ ಮಳೆ ಹಿನ್ನೆಲೆ : ನಾಳೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

⚠️ Contents are protected on this website.