ಬಂದಾರು, ಜ. 05 : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ನಡೆಸಲಾಯಿತು. ಈ ಸಂದರ್ಭ ಶಾಸಕರಾದ ಹರೀಶ್ ಪೂಂಜಾರವರು ಭೇಟಿ ನೀಡಿ, ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಂದಾರು ಕೆಲೆಂಜಿಮಾರು ನಾಗಶ್ರೀ ಗೆಳೆಯರ ಬಳಗದ ಅಧ್ಯಕ್ಷರಾದ ಪುಷ್ಪರಾಜ್ ಗೌಡ ಕೆಲೆಂಜಿಮಾರು, ಕಾರ್ಯದರ್ಶಿ ಲೋಕೇಶ್ ಬಿ. ಬಂದಾರು, ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಗೌಡ ಪಾಲ್ತಿಮಾರ್, ಹಾಗೂ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

