ಬೆಂಗಳೂರು : ವಿಪಕ್ಷಗಳ ಒಗ್ಗಟ್ಟಿನ ಹೋರಾಟಕ್ಕೆ ಮಂಡಿಯೂರಿದ ರಾಜ್ಯ ಸರ್ಕಾರ – ಸಚಿವ ಬಿ. ನಾಗೇಂದ್ರ ರಾಜೀನಾಮೆ ?

Advertisement

ಬೆಂಗಳೂರು, ಆ. 28 : ವಿಪಕ್ಷಗಳ ತೀವ್ರ ಪ್ರತಿಭಟನೆ ಹಾಗೂ ರಾಜಕೀಯ ಒತ್ತಡದ ನಡುವೆಯೇ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಾಗೇಂದ್ರ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಲಭ್ಯವಾಗಿದೆ. ಈ ಹಿಂದೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳುತ್ತಿದ್ದ ನಾಗೇಂದ್ರ, ಇದೀಗ ಕೊನೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ನಾಗೇಂದ್ರ ಅವರ ರಾಜೀನಾಮೆ ಪತ್ರ ಮುಖ್ಯಮಂತ್ರಿ ಕಚೇರಿಗೆ ಸಲ್ಲಿಕೆಯಾಗಿದ್ದು, ಇದೀಗ ಅದನ್ನು ರಾಜ್ಯಪಾಲರ ಅಂಗೀಕಾರಕ್ಕಾಗಿ ಕಳುಹಿಸಬೇಕಿದೆ. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ ಬಳಿಕ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಅಧಿಕೃತವಾಗಿ ಜಾರಿಗೆ ಬರಲಿದೆ. ವಿಪಕ್ಷಗಳು ನಾಗೇಂದ್ರ ಅವರ ರಾಜೀನಾಮೆಗೆ ನಿರಂತರವಾಗಿ ಒತ್ತಾಯಿಸುತ್ತಿದ್ದ ಹಿನ್ನೆಲೆಯಲ್ಲಿ, ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ