ಮಂಗಳೂರು: ನಾಗುರಿ ದುರಂತಕ್ಕೆ ಸಂತಾಪ ಸೂಚಿಸಿದ ಶಾಸಕ ವೇದವ್ಯಾಸ ಕಾಮತ್ – ಘಟನಾ ಸ್ಥಳ, ಆಸ್ಪತ್ರೆಗೆ ಭೇಟಿ !

Advertisement

ಮಂಗಳೂರು,ಜು. 1 : ನಗರದಲ್ಲಿ ಕಳೆದ ರಾತ್ರಿಯಿಂದ ಸುರಿದ ಭಾರೀ ಮಳೆಯ ಕಾರಣಕ್ಕೆ ಕಂಕನಾಡಿ ಸಮೀಪ ನಾಗುರಿ ಗರೋಡಿಯಲ್ಲಿ ತಡೆಗೋಡೆ ಕುಸಿದು ಮನೆಯೊಂದರ ಮೇಲ್ಛಾವಣಿಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಇಬ್ಬರು ಮಕ್ಕಳು ಅಸುನೀಗಿರುವುದು ಹೃದಯ ವಿದ್ರಾವಕ ಘಟನೆಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಸಂತಾಪ ವ್ಯಕ್ತಪಡಿಸಿದರು.

Advertisement

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲದಂತೆ ಮೃತಪಟ್ಟ ಕುಟುಂಬದವರಿಗೆ ಸೂಕ್ತ ಪರಿಹಾರ ಲಭಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಶೀಘ್ರ ಗುಣಮುಖವಾಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಸಂಪೂರ್ಣ ಚಿಕಿತ್ಸೆಯ ವೆಚ್ಚವನ್ನು ರಾಜ್ಯ ಸರ್ಕಾರವೇ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

Advertisement

ಹವಾಮಾನ ಇಲಾಖೆಯ ಪ್ರಕಾರ ಮಳೆಯ ಪ್ರಮಾಣ ಇನ್ನೂ ಮುಂದುವರಿಯಲಿದ್ದು ಈಗಾಗಲೇ ಅಪಾಯಕಾರಿ ಎಂದು ಗುರುತಿಸಲಾಗಿರುವ ಪ್ರದೇಶಗಳಲ್ಲಿ ವಾಸಿಸುವ ಜನರ ಬಗ್ಗೆ ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಸಾರ್ವಜನಿಕರೂ ಎಚ್ಚರಿಕೆ ವಹಿಸಬೇಕು ಎಂದು ಶಾಸಕರು ಹೇಳಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ