ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್

ಬೆಂಗಳೂರು, ಏ. 14 : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹ್ಮದ್ ಅವರು ರಾಜೀನಾಮೆ ನೀಡಿದ್ದಾರೆ.

ನಜೀರ್ ಅಹ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ.

ಸೋಮವಾರ (ಏ.13) ರಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್‌ಗೆ ಡೆಡ್‌ಲೈನ್ ನೀಡಿದ್ದರು. ಜೊತೆಗೆ ಸಂಜೆಯೊಳಗೆ ರಾಜೀನಾಮೆ ನೀಡಬೇಕೆಂದು ಸೂಚನೆ ನೀಡಿದ್ದರು.

ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ಕೊಡದಿದ್ದರೆ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸುವುದಾಗಿ ತಿಳಿಸಿದ್ದರು. ಇದೀಗ ಕೊನೆ ಕ್ಷಣದಲ್ಲಿ ನಜೀರ್ ಅಹಮ್ಮದ್ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.