ನಾರಾವಿ : ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಫೆ.28 ರಿಂದ ಮಾರ್ಚ್ 09ರವರೆಗೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವ

ನಾರಾವಿ, ಫೆ. 18 : ನಾರಾವಿಯ ಸೂರ್ಯ ನಾರಾಯಣ ದೇವಸ್ಥಾನ 15 ವರ್ಷಗಳ ನಂತರ ಫೆ.28 ರಿಂದ ಮಾರ್ಚ್ 09ರವರೆಗೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿದೆ. ಪ್ರತಿಯೊಬ್ಬ ಭಕ್ತಾದಿಗಳು 10 ದಿನಗಳ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಶ್ರೀ ಸೂರ್ಯ ನಾರಾಯಣ ದೇವಸ್ಥಾದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು.

Advertisement

ಸೂರ್ಯನ ಅಧಿಪತ್ಯದಲ್ಲಿ ಇರುವ ದೇವಸ್ಥಾನವೆಂದರೆ ಅದು ನಾರಾವಿ. ಉಡುಪಿ ಹಾಗೂ ದ.ಕ ಜಿಲ್ಲೆಗೆ ಕೊಂಡಿಯಾಗಿರುವ ಸುವರ್ಣ ನದಿಯ ತಟದಲ್ಲಿರುವ ದೇವಸ್ಥಾನವೆಂದರೆ ಅದು ನಾರಾವಿಯ ಸೂರ್ಯ ನಾರಾಯಣ ದೇವಸ್ಥಾನವಾಗಿದೆ. ನಾರಾವಿಯ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಸಭಾಭವನದಲ್ಲಿ ಫೆ.18 ರಂದು ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ಕುರಿತಾಗಿ ವಿವರಿಸಿದರು. ಆಡಳಿತ ಮೊಕ್ತಸರರಾಗಿರುವ ರವೀಂದ್ರ ಪೂಜಾರಿ ಬಾಂದೊಟ್ಟು ಮಾತನಾಡಿ, ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ 10 ದಿನಗಳ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರೂ ಭಾಗಿಯಾಗಬೇಕಾಗಿ ಕೇಳಿಕೊಂಡರು.

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ವೆ.ಮಾ. ಕೃಷ್ಣತಂತ್ರಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಧರ್ಮಧಾಮ ನಾರಾವಿಯ ವಿನಯ ಹೆಗ್ಡೆ ಹಂಬಡ, ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಲಕ್ಷ್ಮಣ ಬಂಗೇರ, ಶಂಕರ್ ತುಂಬೆಗುಡ್ಡೆ, ಯಶೋಧ ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಎನ್.ದಿವಾಕರ ಭಂಡಾರಿ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಜಗದೀಶ್ ಅಂಚನ್ ಧನ್ಯವಾದಗೈದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.