ಬೆಳ್ತಂಗಡಿ, ಆ. 25 : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.), ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಹಾಗೂ ಬಿಲ್ಲವ ಮಹಿಳಾ ವೇದಿಕೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಭಗವಾನ್ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಮಾಜದ ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಹಾಗೂ 13 ಲಕ್ಷ ವಿದ್ಯಾರ್ಥಿವೇತನ ವಿತರಣೆ ಸಮಾರಂಭವು ಆಗಸ್ಟ್ 28, 2026ರ ಶುಕ್ರವಾರ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ವಹಿಸಲಿದ್ದು, ಮಾಜಿ ಸಚಿವರು ಹಾಗೂ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಡಾ. ಚೆನ್ನಬಸಪ್ಪ ಕೆ.ಎ.ಎಸ್, ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಡಾ. ಚೆನ್ನಬಸಪ್ಪ ಕೆ.ಎ.ಎಸ್. ಮೆಸ್ಕಾಂ ಮಂಗಳೂರು ಅಧ್ಯಕ್ಷ ಕೆ. ಹರೀಶ್ ಕುಮಾರ್, ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಮ್, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ. ದೀಕ್ಷಿತಾ, ವಿಜಯ್ ಪಿ. ಪೂಜಾರಿ ಗ್ರೂಪ್ ಆಫ್ ಹೋಟೇಲ್ ಪಂಜುರ್ಲಿ ಹುಬ್ಬಳ್ಳಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗುರು ಸಂದೇಶವನ್ನು ನಿತೇಶ್ ಪೂಜಾರಿ ಮಾರ್ನಾಡ್ ಅವರು ನೀಡಲಿದ್ದಾರೆ.

ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ರಾಜ್ಯ ಮಟ್ಟ ಜಿಲ್ಲಾ ಮಟ್ಟ ತಾಲೂಕು ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಇದರೊಂದಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಸನ್ಮಾನ ಹಾಗೂ ಗೌರವಾರ್ಪಣೆ ನಡೆಯಲಿದೆ. ಪ್ರತಿಭಾವಂತ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಒಟ್ಟು 13 ಲಕ್ಷ ವಿದ್ಯಾರ್ಥಿವೇತನ ವಿತರಿಸಲಾಗುವುದು.
ಭಗವಾನ್ ನಾರಾಯಣ ಗುರುಗಳ “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ಮಾನವೀಯ ಸಂದೇಶವನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು. ತಾಲೂಕಿನ ಎಲ್ಲಾ ಗ್ರಾಮಮಟ್ಟದ ಸಂಘಟನೆಗಳ ಸದಸ್ಯರು. ಸಮಾಜದ ಮುಖಂಡರು, ಯುವಕರು, ಮಹಿಳೆಯರು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.
ಅಧ್ಯಕ್ಷರಾದ ಶ್ರೀ ಜಯವಿಕ್ರಮ ಕಲ್ಲಾಪು, ಉಪಾದ್ಯಕ್ಷರಾದ ಶ್ರೀ ಸುಂದರ ಪೂಜಾರಿ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ಶ್ರೀ ನಿತೀಶ್ ಹೆಚ್. ಕುಕ್ಕೇಡಿ, ಕೋಶಾಧಿಕಾರಿ ಶ್ರೀ ಪ್ರಶಾಂತ್ ಕುಮಾರ್ ಕೊಕ್ರಾಡಿ, ಜೊತೆ ಕಾರ್ಯದರ್ಶಿ ಶ್ರೀ ಸಂತೋಷ್ ಉಪ್ಪಾರ್, ನಿರ್ದೇಶಕರುಗಳಾದ ಶ್ರೀ ವಿಶ್ವನಾಥ ಪೂಜಾರಿ ಗುಂಡೂರಿ, ಶ್ರೀ ನಾರಾಯಣ ಉಚೂರು, ಶ್ರೀ ಚಂದ್ರಶೇಖರ ಇಂದಬೆಟ್ಟು, ಶ್ರೀ ಸಂತೋಷ್ ಕೆ.ಸಿ. ಶ್ರೀ ಸುನಿಲ್ ಕನ್ಯಾಡಿ (ಗುರುರಾಜ್), ಶ್ರೀ ರೂಪೇಶ್ ಕೆ ಧರ್ಮಸ್ಥಳ, ಶ್ರೀಮತಿ ರಾಜಶ್ರೀ ರಮಣ್, ಶ್ರೀಮತಿ ಉಷಾ ಕಿರಣ್, ಶ್ರೀ ಕಮಲಾಕ್ಷ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ಶ್ರೀ ಎಂ.ಕೆ. ಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.




