ಕಡಬ : ದ್ವೇಷ ಭಾಷಣ ಆರೋಪ – ನವೀನ್ ನೆರಿಯ ವಿರುದ್ಧ ಪ್ರಕರಣ ವಜಾಗೊಳಿಸಿ ಹೈಕೋರ್ಟ್ ಆದೇಶ

ಕಡಬ : ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ಅನ್ನು ಹೈಕೋರ್ಟ್ ನ.12ರಂದು ವಜಾಗೊಳಿಸಿ ಆದೇಶಿಸಿದೆ. ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೋಲಿಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ, ಜೂ.4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯರವರು ದ್ವೇಷಭಾಷಣ ಮಾಡಿದ್ದಾರೆಂದು ಅವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

ತಡರಾತ್ರಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ಪೊಲೀಸರು ತೆರಳಿ ಅವರ ಜತೆ ಫೋಟೋ ತೆಗೆದಿದ್ದರು. ಈ ಘಟನೆಯನ್ನು ಖಂಡಿಸಿ ಕಡಬ ಠಾಣೆಯ ಎದುರು ಜೂ.4ರಂದು ಸಂಜೆ ಪ್ರತಿಭಟನೆ ನಡೆಸಲಾಗಿದ್ದು, ನವೀನ್ ನೆರಿಯ ಅವರು ಭಾಷಣ ಮಾಡಿದ್ದರು. ಈ ಘಟನೆಯ ಬಗ್ಗೆ ದ್ವೇಷ ಭಾಷಣ ಮಾಡಿ ಕೋಮು ಸಾಮರಸ್ಯಕ್ಕೆ ಧಕ್ಕೆ ಮಾಡಲಾಗಿದೆ ಎಂದು ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ನವೀನ್ ನೆರಿಯ ಅವರು ಖ್ಯಾತ ವಕೀಲ ಅರುಣ್ ಶ್ಯಾಮ್ ಅವರ ಮೂಲಕ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆದು, ನ.12ರಂದು ಹೈಕೋರ್ಟ್ ಅವರ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ನ್ನು ರದ್ದುಗೊಳಿಸಿ ಆದೇಶಿಸಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.