ಬೆಳ್ತಂಗಡಿ : ನೇತ್ರಾವತಿ ಪೀಕ್, ಕಡಮಗುಂಡಿ ಜಲಪಾತಗಳಿಗೆ ಪ್ರವೇಶ ತಾತ್ಕಾಲಿಕ ನಿರ್ಬಂಧ

ಬೆಳ್ತಂಗಡಿ, ಜು. 9 : ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರು ಹಾಗೂ ಚಾರಣಿಗರ ಸುರಕ್ಷೆ ದೃಷ್ಟಿಯಿಂದ ಕುದುರೆಮುಖ ವನ್ಯಜೀವಿ ವಿಭಾಗದ ಬೆಳ್ತಂಗಡಿ ವನ್ಯಜೀವಿ ವಲಯ ವ್ಯಾಪ್ತಿಯ ನೇತ್ರಾವತಿ ಪೀಕ್, ಕಡಮಗುಂಡಿ (ದಿಡುಪೆ) ಜಲಪಾತಗಳಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.

Advertisement

ನೇತ್ರಾವತಿ ಪೀಕ್ ಚಾರಣವನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದ್ದು, ಜು. 10ರ ಬಳಿಕ ಮಳೆ ಪ್ರಮಾಣ, ಹವಾಮಾನ ಪರಿಸ್ಥಿತಿ ನೋಡಿ ನಿರ್ಧಾರ ಕೈಗೊಳ್ಳಲಾಗುವುದು. ದಿಡುಪೆಯ ಕಡಮಗುಂಡಿ ಜಲಪಾತಕ್ಕೂ ಜು. 9ರಿಂದ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ.

ಮುಂದಿನ ಆದೇಶದವರೆಗೆ ಯಾರಿಗೂ ಜಲಪಾತದ ಪ್ರದೇಶಕ್ಕೆ ತೆರಳಲು ಅವಕಾಶ ಇರುವುದಿಲ್ಲ ಎಂದು ಬೆಳ್ತಂಗಡಿ ವನ್ಯಜೀವಿ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.