ಬೆಳ್ತಂಗಡಿ, ಜು. 7 : ತಾಲೂಕಿನಲ್ಲಿ ಹರಿಯುತ್ತಿರುವ ಜೀವನದಿ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಕೆಲವು ಭಾಗದಲ್ಲಿ ತೋಟ ಪ್ರದೇಶ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಧಾರಕಾರವಾಗಿ ಸುರಿಯುತ್ತಿದ್ದು, ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿಯೂ ಧಾರಕಾರ ಮಳೆಯಾಗುತ್ತಿದ್ದು, ಚಾರ್ಮಾಡಿ ಭಾಗದಲ್ಲಿಯೂ ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಹೀಗಾಗಿ ನದಿ ತೀರದಲ್ಲಿ ಸಂಚರಿಸುವಂತಹ ಅಥವಾ ನದಿಗೆ ಇಳಿಯುವಂತಹ ದುಸ್ಸಾಹಸ ಸಾರ್ವಜನಿಕರು ಮಾಡಬಾರದು. ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವುದರಿಂದ ನದಿ ತೀರದ ನಾಗರಿಕರು ಎಚ್ಚರಿಕೆ ವಹಿಸುವುದು ಸೂಕ್ತ.


