ಉಡುಪಿ : ಆಲಂಗಾರು–ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಗೆ ಮಣ್ಣು ಸುರಿದು ರಸ್ತೆ ಮುಚ್ಚಿ ಪ್ರತಿಭಟನೆ ನಡೆಸಿದ ಸ್ಥಳೀಯರು

Advertisement

ಉಡುಪಿ, ಏ. 15 : ಪದೇಪದೇ ಅಪಘಾತಗಳು ನಡೆಯುತ್ತಿರುವ ಆಲಂಗಾರು–ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯರು ಸೋಮವಾರ ಟಿಪ್ಪರ್ ಲಾರಿಯಲ್ಲಿ ಮಣ್ಣು ಸುರಿದು ರಸ್ತೆ ಮುಚ್ಚಿ ಪ್ರತಿಭಟನೆ ನಡೆಸಿದರು.

ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದರೂ ಭದ್ರತಾ ಕ್ರಮಗಳ ಕೊರತೆ ಸ್ಪಷ್ಟವಾಗಿ ಕಾಣಿಸುತ್ತಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಅಪಘಾತಗಳು ಸಂಭವಿಸಿ ಹಲವರು ಗಾಯಗೊಂಡಿದ್ದು, ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಸೋಮವಾರವೂ ಕಾರೊಂದು ಅಪಘಾತಕ್ಕೀಡಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.

ಸಾರ್ವಜನಿಕರ ಮನವಿಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆ ಆಕ್ರೋಶಗೊಂಡ ಗ್ರಾಮಸ್ಥರು ಟಿಪ್ಪರ್ ಲಾರಿಗಳ ಮೂಲಕ ಮಣ್ಣು ತರಿಸಿ ಹೆದ್ದಾರಿಯ ಮೇಲೆ ಸುರಿದು ಸಂಚಾರ ತಡೆದು, ಅವೈಜ್ಞಾನಿಕ ಕಾಮಗಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ರೀತಿಯ ಪ್ರತಿಭಟನೆಗಳ ಮೂಲಕವಾದರೂ ಅಧಿಕಾರಿಗಳ ಗಮನ ಸೆಳೆಯಬೇಕು, ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಅಪಘಾತಗಳನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ