ಬೆಳ್ತಂಗಡಿ : ತುರ್ತು ಸಭೆಯ ಇಂಪ್ಯಾಕ್ಟ್ – ಶಾಸಕರ ಸೂಚನೆಯ ಬಳಿಕ ರಾಷ್ಟ್ರೀಯ ಹೆದ್ದಾರಿ ಗುಂಡಿಗೆ ತಾತ್ಕಾಲಿಕ ಮುಕ್ತಿ !

Advertisement

ಬೆಳ್ತಂಗಡಿ, ಆ. 03 : ತಾಲೂಕಿನಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ ಗುಂಡಿಗಳು ಪ್ರತ್ಯಕ್ಷವಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಈ ಹಿನ್ನಲೆಯಲ್ಲಿ ತುರ್ತು ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಶೀಘ್ರವೇ ಹೆದ್ದಾರಿಯ ಗುಂಡಿಗಳಿಗೆ ಮುಕ್ತಿ ನೀಡುವಂತೆ ಸೂಚನೆ ನೀಡಿದ್ದರು. ಇದೀಗ ಬೆಳ್ತಂಗಡಿ ಪೇಟೆ ಭಾಗದಲ್ಲಿ ಗುಂಡಿಗಳಿಗೆ ವೆಟ್ ಮಿಕ್ಸ್ ಜೊತೆಗೆ ಜಲ್ಲಿಕಲ್ಲು ಹಾಕಿ ಗುಂಡಿಗಳನ್ನು ಮುಚ್ಚಲಾಗುತ್ತಿದೆ.

Advertisement

ಇಂದು ಬೆಳಗ್ಗೆ ಶಾಸಕ ಹರೀಶ್ ಪೂಂಜಾರವರ ಅಧ್ಯಕ್ಷತೆಯಲ್ಲಿ ತುರ್ತು ಸಭೆಯು ತಾಲೂಕು ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕಾರ್ಯಾಚರಣೆ, ಪರಿಹಾರ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯ ಕುರಿತು ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ಅಧಿಕಾರಿಗಳಿಗೆ ಶಾಸಕರು ನೀಡಿದ್ದರು.

Advertisement

ಅಲ್ಲದೆ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಹೆದ್ದಾರಿಗಳ ಬೃಹತ್ ಗುಂಡಿಗಳಿಗೆ ಶೀಘ್ರವೇ ಮುಕ್ತಿ ನೀಡುವಂತೆ ಸೂಚನೆಯನ್ನೂ ನೀಡಿದ್ದರು. ಇದೀಗ ತಾತ್ಕಾಲಿಕವಾಗಿ ಗುಂಡಿಗಳಿಗೆ ಮುಕ್ತಿ ದೊರಕಿದಂತಾಗಿದೆ. ಇದೇ ರೀತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮೀಣ ಭಾಗದ ರಸ್ತೆಗಳಿಗೂ ಕಾಯಕಲ್ಪ ನೀಡಲಿ ಎಂಬುದು ನಮ್ಮ ಆಶಯ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ