ನಿಡಿಗಲ್ : ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ

ನಿಡಿಗಲ್, ಏ. 02 : ತುಳುನಾಡಿನ ಸತ್ಯನಾಪುರದ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಇಂದು ಬೆಳಗ್ಗಿನಿಂದ ಗಣಹೋಮ, ರುದ್ರಾಭಿಷೇಕ, ಮಹಾಪೂಜೆ ಸೇರಿದಂತೆ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು. ವೇದಮೂರ್ತಿ ನಾಗಪಾತ್ರಿ ಶ್ರೀ ಸುಬ್ರಹ್ಮಣ್ಯ ಮಧ್ಯಸ್ಥ ಇವರ ನೇತೃತ್ವದಲ್ಲಿ ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ ಹಾಗೂ ಶ್ರೀ ದೇವರ ಉತ್ಸವ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ ನಡೆಯಿತು.

Advertisement

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಕೆ.ಎಂ. ನಾಗೇಶ್ ಕುಮಾರ್ ಗೌಡ ಸ್ವಾಮಿ ಪ್ರಸಾದ್ ನಿಡ್ಲೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಗುರುರಾಜ್ ಗುರಿಪಳ್ಳ ಹಾಗೂ ನೂರಾರು ಭಕ್ತರು ನೆರೆದಿದ್ದರು.

ಇಂದು ಶ್ರೀ ಕ್ಷೇತ್ರದಲ್ಲಿ ರಾತ್ರಿ 07-30ರಿಂದ ವಾರ್ಷಿಕ ನಡ್ವಾಲ್ ಸಿರಿಜಾತ್ರೆ, ರಾತ್ರಿ 10 ಗಂಟೆಗೆ ರಾಘು ಮಾಸ್ಟ್ರು ನಾಟಕ ಪ್ರದರ್ಶನ ನಡೆಯಲಿದೆ.

ಧ್ವನಿ ನ್ಯೂಸ್ ಯೂಟ್ಯೂಬ್ ಚಾನೆಲ್ ನಲ್ಲಿ “ನಡ್ವಾಲ್ ಸಿರಿಜಾತ್ರೆ” ನೇರಪ್ರಸಾರಗೊಳ್ಳಲಿದೆ.

LIVE LINK

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.