ಕಲ್ಮಂಜ : ನಿಡಿಗಲ್ ಸ.ಹಿ.ಪ್ರಾ. ಶಾಲೆ, ಪ್ರೌಢಶಾಲಾ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಕಲ್ಮಂಜ, ಜ. 04 : ಗ್ರಾಮದ ನಿಡಿಗಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ಸರ್ವಾಂಗೀಣ ಅಭಿವೃದ್ಧಿಗೆ ಒಟ್ಟು 47.15 ಲಕ್ಷ ಅನುದಾನವನ್ನು ಶಾಸಕ ಹರೀಶ್ ಪೂಂಜಾ ಒದಗಿಸಿದ್ದಾರೆ.

ಗ್ರಾಮದ ನಿಡಿಗಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ಮೇಲ್ಬಾವಣಿ ದುರಸ್ತಿ ರೂ. 3.00 ಲಕ್ಷ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನ ವಿಸ್ತರಣೆಗೆ ರೂ. 5.00 ಲಕ್ಷ, ಸರಕಾರಿ ಪ್ರೌಢಶಾಲೆಗೆ ನೂತನ ಕೊಠಡಿ ನಿರ್ಮಾಣ ರೂ. 17.15 ಲಕ್ಷ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಸಭಾಂಗಣಕ್ಕೆ ಟೈಲ್ಸ್ ಅಳವಡಿಕೆಗೆ ರೂ. 5.00 ಲಕ್ಷ, ನಿಡಿಗಲ್‌ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ರೂ. 17.00 ಲಕ್ಷ ಒದಗಿಸಿದ್ದಾರೆ.

ಶಾಸಕರು ವಿಶೇಷ ಮುತುವರ್ಜಿ ವಹಿಸಿ ಅನುದಾನ ಒದಗಿಸಿದ್ದಾಕ್ಕಾಗಿ ಶಾಲಾಡಳಿತ ಮಂಡಳಿ, ಶಾಲಭಿಮಾನಿಗಳು, ವಿದ್ಯಾರ್ಥಿ ಪೋಷಕರು ಹಾಗೂ ಊರವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.