ಸರ್ಕಾರಿ ಶಾಲೆ, ಪಿಯು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ- ಇನ್ನು ಪಠ್ಯಪುಸ್ತಕದ ಜೊತೆಗೆ ನೋಟ್‌ಬುಕ್‌ ಕೂಡಾ ಉಚಿತ !

ಬೆಂಗಳೂರು, ಡಿ. 03 : ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ನೀಡಲು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.

Advertisement

ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪಠ್ಯಪುಸ್ತಕಗಳ ಜೊತೆ ಉಚಿತ ನೋಟ್ ಬುಕ್ ಕೂಡಾ ಸಿಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ಶೇ 90% ಬಡ ಮಕ್ಕಳು ಓದುತ್ತಿದ್ದಾರೆ. ಇದರಲ್ಲಿ ಪದವಿ ಪೂರ್ವ ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳು ಸಿಗದ ಕಾರಣ ಇಷ್ಟು ವರ್ಷ ನೋಟ್ ಬುಕ್ ಜೊತೆಗೆ ಪಠ್ಯಪುಸ್ತಕಕಗಳನ್ನೂ ಖರೀದಿಸಿ ಬಳಸಬೇಕಿತ್ತು. ಆದರೆ ಇನ್ನು ಮುಂದೆ ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 6 ನೋಟ್ ಬುಕ್​ಗಳನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.

ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು, ಈಗಾಗಲೇ ಸರ್ಕಾರ ಪ್ರತಿ ವಿದ್ಯಾರ್ಥಿಗೆ ಉಚಿತ ಪಠ್ಯಪುಸ್ತಕಗಳನ್ನ ನೀಡುತ್ತಿದೆ. ರಾಜ್ಯದ ಶಿಕ್ಷಣ ಇಲಾಖೆ ಉಚಿತ ಸಮವಸ್ತ್ರವನ್ನೂ ನೀಡುತ್ತಿದೆ. ಆದರೆ ನೋಟ್ಸ್ ಬುಕ್ ಇಲ್ಲದೆ ತರಗತಿಯಲ್ಲಿ ಶಿಕ್ಷಕರು ಕಲಿಸುವುದನ್ನು ಬರೆದುಕೊಳ್ಳುವುದಕ್ಕೆ ಆಗುತ್ತಿಲ್ಲ. ಪೋಷಕರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೋಟ್ಸ್ ಬುಕ್ ಸಹ ಸಿಗುತ್ತಿಲ್ಲ. ಹೀಗಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತವಾಗಿ 6 ವಿಷಯಗಳಿಗೆ 6 ನೋಟ್ಸ್ ಬುಕ್ ನೀಡಲು ಮುಂದಾಗಿದೆ ಎಂದಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

⚠️ Contents are protected on this website.