ಮಂಗಳೂರು : ಜಿಲ್ಲಾ ಖಜಾನೆ ಕಚೇರಿ ನೌಕರ ನಾಪತ್ತೆ

Advertisement

ಮಂಗಳೂರು, ಆ. 17 : ನಗರದ ಜಿಲ್ಲಾ ಖಜಾನೆ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ (ಎಫ್‌ಡಿಎ) ಕಾರ್ಯನಿರ್ವಹಿಸುತ್ತಿದ್ದ ಬೆಂಗಳೂರಿನ ನಿವಾಸಿ ರೋಹನ್ ಎಂ. (33) ಎಂಬುವವರು ಆಗಸ್ಟ್ ೧ರಿಂದ ನಾಪತ್ತೆಯಾಗಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.

Advertisement

ಬೆಂಗಳೂರಿನ ನಂಜಮ್ಮ ಲೇಔಟ್ ನಿವಾಸಿ ಮುನಿರಾಜ್ ರೆಡ್ಡಿ ಅವರ ಪುತ್ರ ರೋಹನ್, ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಜಿಲ್ಲಾ ಖಜಾನೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹುಣ್ಣಿಮೆಯ ಹಿನ್ನೆಲೆ ಗುಜರಾತ್‌ಗೆ ತೆರಳುವುದಾಗಿ ತಿಳಿಸಿ ರೋಹನ್ ಮನೆಯಿಂದ ಹೊರಟಿದ್ದರು. ಆದರೆ, ಬಳಿಕ ಅವರು ವಾಪಸ್ ಆಗಿಲ್ಲ. ನಾಪತ್ತೆಯಾದ ಬಳಿಕ ಅವರ ಮೊಬೈಲ್ ಫೋನ್ ಕೂಡ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ದೂರು ದಾಖಲಾಗಿದೆ.

Advertisement

ಈ ಹಿನ್ನೆಲೆಯಲ್ಲಿ ರೋಹನ್ ಅವರ ತಂದೆ ಮುನಿರಾಜ್ ರೆಡ್ಡಿ ಅವರು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ