IPL 2026: ಶ್ರೀಲಂಕಾ ಕ್ರಿಕೆಟ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ RCB ಆಟಗಾರ; ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ?

Advertisement

IPL 2026 : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಶ್ರೀಲಂಕಾದ ವೇಗಿ ನುವಾನ್ ತುಷಾರ ಐಪಿಎಲ್ 2026ರಲ್ಲಿ ಭಾಗವಹಿಸಲು ಎನ್‌ಒಸಿ ನೀಡದ ಕಾರಣ ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ನ ಉನ್ನತ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ನಿಗದಿತ ಫಿಟ್‌ನೆಸ್ ಮಾನದಂಡಗಳನ್ನು ಪೂರೈಸಲು ವಿಫಲವಾದ ಕಾರಣ ತುಷಾರ ಅವರಿಗೆ ಎನ್‌ಒಸಿ ನೀಡಲಾಗಿಲ್ಲ. ಆದರೆ ಈಗ, ಐಪಿಎಲ್ ಆಡಲು ಅವಕಾಶ ನೀಡುವಂತೆ ಎಸ್‌ಎಲ್‌ಸಿಗೆ ನಿರ್ದೇಶನ ನೀಡುವಂತೆ ಕೋರಿ ವೇಗಿ ಪ್ರಕರಣ ದಾಖಲಿಸಿದ್ದಾರೆ. ವರದಿ ಪ್ರಕಾರ, ತುಷಾರ ಅವರು ತಮ್ಮ ಕೇಂದ್ರ ಒಪ್ಪಂದವನ್ನು ನವೀಕರಿಸದಿರಲು ಎಸ್‌ಎಲ್‌ಸಿಗೆ ತಿಳಿಸಿದ್ದಾರೆ.

ಶ್ರೀಲಂಕಾ ಮೂಲದ ಮಾಧ್ಯಮ ಸಂಸ್ಥೆ ನ್ಯೂಸ್‌ವೈರ್ ವರದಿ ಪ್ರಕಾರ, ತುಷಾರ ಅವರು ತಮ್ಮ ದೂರಿನಲ್ಲಿ ಶ್ರೀಲಂಕಾ ಕ್ರಿಕೆಟ್ ಅಧ್ಯಕ್ಷ ಶಮ್ಮಿ ಸಿಲ್ವಾ, ಕಾರ್ಯದರ್ಶಿ ಬಂಡುಲಾ ದಿಸಾನಾಯಕೆ, ಖಜಾಂಚಿ ಸುಜೀವ ಗೋಡಾಲಿಯಡ್ಡ ಮತ್ತು ಸಿಇಒ ಆಶ್ಲೇ ಡಿ ಸಿಲ್ವಾ ಅವರನ್ನು ಪ್ರತಿವಾದಿಗಳೆಂದು ಹೆಸರಿಸಿದ್ದಾರೆ.

ವಿಚಾರಣೆಯನ್ನು ಏಪ್ರಿಲ್ 9ಕ್ಕೆ ನಿಗದಿಪಡಿಸಲಾಗಿದ್ದು, ಗುರುವಾರ ಕೊಲಂಬೊ ಜಿಲ್ಲಾ ನ್ಯಾಯಾಲಯವು ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ವರದಿ ಪ್ರಕಾರ, ತುಷಾರ ಅವರು SLC ಜೊತೆಗಿನ ತಮ್ಮ ಒಪ್ಪಂದವು ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಈ ಒಪ್ಪಂದವನ್ನು ನವೀಕರಿಸದಿರಲು ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಸರಿಯುವ ತಮ್ಮ ಇಚ್ಛೆಯನ್ನು ಮಂಡಳಿಗೆ ತಿಳಿಸಿದ್ದರು ಎಂದು ಹೇಳಿಕೊಂಡಿದ್ದಾರೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ