ಸುಳ್ಯ : ನಿಂತಿದ್ದ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿ- ಚಾಲಕನಿಗೆ ಗಂಭೀರ ಗಾಯ

Advertisement

ಸುಳ್ಯ, ಡಿ. 22 : ತಾಲೂಕಿನ ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸುಳ್ಯದಿಂದ ಕಲ್ಲಗುಂಡಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಗೂನಡ್ಕ ಬಳಿ ರಸ್ತೆ ಬದಿಯಲ್ಲಿ ನಿಂತಿತ್ತು. ನಿಂತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿದೆನ್ನಲಾಗಿದೆ.

Advertisement

ಓಮ್ನಿ ಕಾರು ಲಾರಿ ಅಡಿಯಲ್ಲಿ ಸಿಲುಕಿಕೊಂಡಿತ್ತು. ಆದರೆ, ಅಪಘಾತದ ಸಮಯದಲ್ಲಿ ಕಾರು ಚಾಲಕ ಹತ್ತಿರದ ಅಂಗಡಿಯಲ್ಲಿ ನಿಂತಿದ್ದರಿಂದ ಯಾವುದೇ ಪ್ರಾಣಾಪಾಯ ಆಗದೇ ಪಾರಾಗಿದ್ದಾರೆ. ಉರುಳಿಬಿದ್ದ ಲಾರಿಯನ್ನು ಜೆಸಿಬಿ ಬಳಸಿ ಮೇಲಕ್ಕೆತ್ತಲಾಯಿತು. ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ