ಗ್ರಾಹಕರಿಗೆ ಬೆಲೆಯೇರಿಕೆ ಶಾಕ್ – ಕೆಲವೇ ದಿನಗಳಲ್ಲಿ ಶತಕ ದಾಟುವ ನಿರೀಕ್ಷೆಯಲ್ಲಿ ಈರುಳ್ಳಿ ಬೆಲೆ !

Advertisement

ಬೆಂಗಳೂರು, ಆ. 24 : ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಆರಂಭವಾಗುತ್ತದೆ. ಹೀಗಾಗಿ ತರಕಾರಿ ಬೆಲೆ ಕೂಡ ಏರಿಕೆ ಕಾಣುತ್ತದೆ. ಸದ್ಯ ಈರುಳ್ಳಿ ಬೆಲೆ ಕೆ.ಜಿ.ಗೆ 60 ರಿಂದ 75 ರೂ. ತಲುಪಿದ್ದು, ಕೆಲವೇ ದಿನಗಳಲ್ಲಿ 100 ರೂ. ಮುಟ್ಟುವ ಸಾಧ್ಯತೆಯಿದೆ.

Advertisement

ರಾಜ್ಯದಲ್ಲಿ ಒಂದೆಡೆ ಮುಂಗಾರು ಮಳೆ ಕೊರತೆಯಿಂದ ಬರಗಾಲ ಉಂಟಾಗಿದೆ. ಮಳೆ ಇಲ್ಲದೆ ಈ ಬಾರಿ ಸುಮಾರು ಶೇಕಡಾ 70% ರಷ್ಟು ಈರುಳ್ಳಿ ಇಳುವರಿ ಕಡಿಮೆ ಆಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ದಾಸ್ತಾನು ಕಡಿಮೆಯಾಗಿದ್ದು, ಬೆಲೆ ಏರಿಕೆ ಕಾಣುತ್ತದೆ.

Advertisement

ಪ್ರಸ್ತುತ ಕರ್ನಾಟಕ ಮತ್ತು ಮಹಾರಾಷ್ಟ್ರದ ಈರುಳ್ಳಿ ಮಾತ್ರ ಮಾರುಕಟ್ಟೆಯಲ್ಲಿ ಲಭ್ಯವಿದೆ. ಮತ್ತೊಂದೆಡೆ, ಇಲ್ಲಿಂದ ಹೊರ ರಾಜ್ಯ ಹಾಗೂ ಹೊರ ದೇಶಗಳಿಗೆ ಈರುಳ್ಳಿ ರಫ್ತಾಗುತ್ತಿದ್ದರೂ, ಹೊರಗಿನಿಂದ ಆಮದು ಸಂಪೂರ್ಣ ಸ್ಥಗಿತಗೊಂಡಿರುವುದು ಬೆಲೆ ಏರಿಕೆಗೆ ಮತ್ತೊಂದು ಕಾರಣವಾಗಿದೆ.

ಚಿಲ್ಲರೆ ಮಾರುಕಟ್ಟೆಯಲ್ಲಿ ಸಾಮಾನ್ಯ ಮತ್ತು ಉತ್ತಮ ಗುಣಮಟ್ಟದ ಈರುಳ್ಳಿ ಬೆಲೆ ಪ್ರತಿ ಕೆಜಿಗೆ 10 ರಿಂದ 20 ರೂಪಾಯಿ ಏರಿಕೆಯಾಗಿದೆ. ಈ ಬೆಲೆ ಏರಿಕೆ ಪ್ರಕ್ರಿಯೆಯು ಮುಂದಿನ ಒಂದು-ಒಂದೂವರೆ ತಿಂಗಳ ಕಾಲ ಮುಂದುವರಿಯಲಿದ್ದು, ಕೆಲವೇ ದಿನಗಳಲ್ಲಿ ಕೆಜಿ ಈರುಳ್ಳಿ ದರ 100 ರೂಪಾಯಿ ಮುಟ್ಟುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : “ಎಸ್ ಯಾಂಡ್ ವಿ ಫ್ಯಾಮಿಲಿ ಬ್ಯೂಟಿ ಸಲೂನ್ ಮತ್ತು ಅಕಾಡೆಮಿ” ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವ ಸನ್ಮಾನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಮರಿಯಮ್ಮ ಕಾಂಗ್ರೆಸ್ ಸೇರ್ಪಡೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಚಿಕ್ಕಮಗಳೂರು : ಟಿಪ್ಪು ಸುಲ್ತಾನ್ ಬೃಹತ್ ಕಟೌಟ್‌ಗೆ “ನಾವು ಪಾಕಿಸ್ತಾನಿ ಮುಜಾಹಿದ್‌ಗಳು…” ಹಾಡು ಬಳಸಿ ರೀಲ್ಸ್ – ಪ್ರಕರಣ ದಾಖಲು

⚠️ Contents are protected on this website.