ಬೀದರ್ : ಆನ್‌ಲೈನ್ ಗೇಮ್ ಚಟ – ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ : ಹಾಸ್ಟೆಲ್ ಮುಂದೆ ಕುಳಿತು ಕಣ್ಣೀರು ಹಾಕಿದ ಅಪ್ಪ !

ಬೀದ‌ರ್, ಮಾ. 24 : ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಸುಮಾರು 80 ಸಾವಿರ ರೂ. ಕಳೆದುಕೊಂಡ ಕಾರಣ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.

Advertisement

ಅನಿಷ್ಕಾರ್ ಚವ್ಹಾಣ್ (21 ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ನಿವಾಸಿ ಅನಿಷ್ಕಾರ್ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನ್‌ಲೈನ್ ಗೇಮ್ ನಿಂದ ಹಣ ಕಳೆದುಕೊಂಡಿದಕ್ಕೆ ವಿದ್ಯಾರ್ಥಿ ಅನಿಷ್ಕಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಪೋಷಕರು ದೂರು ಸಲ್ಲಿಸಲಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಮಾಡಲಾಗುವುದು ಎಂದು ಎಸ್ಪಿ ಪ್ರದೀಪ್ ಹೇಳಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.