ಬೆಳ್ತಂಗಡಿ : ಪಡಂಗಡಿಯಲ್ಲಿ ಹದಗೆಟ್ಟಿದ್ದ ರಸ್ತೆಗೆ ತಾತ್ಕಾಲಿಕ ದುರಸ್ತಿ ಕ್ರಮ ಕೈಗೊಂಡ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ, ಜು. 29 : ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ಗುರುವಾಯನಕೆರೆ – ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದ ಹದಗೆಟ್ಟಿದ್ದ ರಸ್ತೆಯನ್ನು ತಾತ್ಕಾಲಿಕವಾಗಿ ವೆಟ್ ಮಿಕ್ಸ್ ಹಾಕಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಲಾಯಿತು.

ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ವೆಟ್ ಮಿಕ್ಸ್ ಹಾಕಿ ರಸ್ತೆ ದುರಸ್ತಿ ಕಾರ್ಯ ಕೈಗೊಂಡಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ. ಶಾಶ್ವತ ದುರಸ್ತಿ ಕಾಮಗಾರಿಯನ್ನೂ ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಸೌಜನ್ಯ ಪ್ರಕರಣದ ಮರು ತನಿಖೆ : ಬೆಳ್ತಂಗಡಿ ಕೋರ್ಟ್‌ನಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರ ರಕ್ತದ ಮಾದರಿ ಸಂಗ್ರಹ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಅತ್ಯಂತ ವಿಜೃಂಭಣೆಯಿಂದ ಜರುಗಿದ 5ನೇ ವರ್ಷದ ಪಿಲಿ ಅಜನೆ – ಬರ್ಕೆ ಫ್ರೆಂಡ್ಸ್ (ರಿ.) ತಂಡದಿಂದ ಅಮೋಘ ಪ್ರದರ್ಶನ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !