ಕಲ್ಮಂಜ : ಶಾಸಕ ಹರೀಶ್ ಪೂಂಜಾರ ಹುಟ್ಟುಹಬ್ಬ – ಕಲ್ಮಂಜ ಯುವಕರಿಂದ ಪಜಿರಡ್ಕದಲ್ಲಿ ವಿಶೇಷ ಪೂಜೆ

Advertisement

ಕಲ್ಮಂಜ, ಆ. 17 : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜಾ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಕಲ್ಮಂಜದ ಹರೀಶ್ ಪೂಂಜಾ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರಿಂದ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಅರ್ಪಿಸಲಾಯಿತು.

Advertisement

ಶಾಸಕ ಹರೀಶ್ ಪೂಂಜಾರವರಿಗೆ ದೀರ್ಘಾಯುಷ್ಯ, ಆರೋಗ್ಯ, ಸಂಪತ್ತು ಪ್ರಾಪ್ತಿಯಾಗಲಿ. ಅದೇ ರೀತಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಮೂರನೇ ಅವಧಿಗೆ ಗೆದ್ದು, ಶಾಸಕ ಸ್ಥಾನದಿಂದ ಸಚಿವ ಸ್ಥಾನವನ್ನು ಅಲಂಕರಿಸಲಿ ಎಂದು ಕಾರ್ಯಕರ್ತರ್ತರು ದೇವರಿಗೆ ವಿಶೇಷ ಪೂಜೆ ಅರ್ಪಿಸಿ, ಪ್ರಾರ್ಥಿಸಿದರು.

Advertisement

ಈ ಸಂದರ್ಭದಲ್ಲಿ ಕಲ್ಮಂಜ 89ನೇ ವಾರ್ಡ್ ಬಿಜೆಪಿ ಬೂತ್ ಸಮಿತಿಯ ಕಾರ್ಯದರ್ಶಿ ಶ್ರೀ ಅನಿಲ್ ಕುಮಾರ್, ಬೂತ್ ಸಮಿತಿ ಮಾಜಿ ಅಧ್ಯಕ್ಷರಾದ ಶ್ರೀ ಸಾಂತಪ್ಪ ಎಂ., ಸಂದೀಪ್ ಎಸ್., ಪುರಕ್ಷಿತ್, ಭರತೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ