ಪಾಕಿಸ್ತಾನ : ಮದುವೆ ಸಮಾರಂಭದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ – 7 ಮಂದಿ ಸಾವು, ಹಲವರಿಗೆ ಗಾಯ

Advertisement

ಇಸ್ಲಮಾಬಾದ್‌ : ವಿವಾಹ ಸಮಾರಂಭವೊಂದರಲ್ಲಿ ಆತ್ಮಾಹುತಿ ಬಾಂಬರ್ ಒಬ್ಬ ಸ್ಫೋಟಕ ಉಡುಪನ್ನು ಧರಿಸಿಕೊಂಡು, ಸ್ಫೋಟಿಸಿದ ಘಟನೆ ವಾಯುವ್ಯ ಪಾಕಿಸ್ತಾನದ ಖೈಬರ್ ಪಣ್ಮುನ್ನಾ ಪ್ರಾಂತ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿ, 25 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಸರ್ಕಾರಿ ಪರ ಸಮುದಾಯದ ನಾಯಕ ನೂರ್ ಅಲಂ ಮೆಹ್ಮದ್ ಅವರ ನಿವಾಸದ ಮೇಲೆ ಈ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಬಾಂಬ್ ದಾಳಿಯಿಂದಾಗಿ ಅವಶೇಷಗಳು ಮತ್ತು ರಕ್ತದ ಕಲೆಗಳು ಪ್ರದೇಶದಾದ್ಯಂತ ಹರಡಿಕೊಂಡಿವೆ ಎಂದು ವರದಿಯಾಗಿದೆ.

Advertisement

ದಾಳಿ ನಡೆಯುವ ಸಂದರ್ಭದಲ್ಲಿ ವಿವಾಹ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದರು, ಭೀಕರ ಸ್ಫೋಟದಿಂದಾಗಿ ಛಾವಣಿ ಕುಸಿದು ಬಿದ್ದು, ರಕ್ಷಣಾ ಕಾರ್ಯಗಳಿಗೆ ಅಡ್ಡಿಯಾಯಿತು. ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಕಷ್ಟವಾಯಿತು. ಮೃತರು ಮತ್ತು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಶಾಂತಿ ಸಮಿತಿಯ ನಾಯಕ ವಹೀದುಲ್ಲಾ ಮೆಹ್ಮದ್ ಅಲಿಯಾಸ್ ಜಿಗ್ರಿ ಮೆಹ್ರದ್ ಮೃತಪಟ್ಟವರಲ್ಲಿ ಸೇರಿದ್ದಾರೆನ್ನಲಾಗಿದೆ. ದಾಳಿಯ ಹೊಣೆಯನ್ನು ಯಾವುದೇ ಗುಂಪು ತಕ್ಷಣಕ್ಕೆ ಹೊತ್ತುಕೊಂಡಿಲ್ಲ. ಆದರೆ, ಆತ್ಮಹತ್ಯಾ ಬಾಂಬ್ ದಾಳಿಯ ಹಿಂದೆ ತೆಹ್ರಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಎಂದೂ ಕರೆಯಲ್ಪಡುವ ಪಾಕಿಸ್ತಾನಿ ತಾಲಿಬಾನ್ ಸಂಘಟನೆಯ ಕೈವಾಡವಿದೆ ಎಂದು ಶಂಕಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಈ ಸಂಘಟನೆ ಪಾಕಿಸ್ತಾನದಲ್ಲಿ ಹಲವಾರು ದಾಳಿಗಳನ್ನು ನಡೆಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ