ಶಿವಮೊಗ್ಗ : ನೀರಾನೆ ದಾಳಿಯಿಂದ 27 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗ, ಮಾ. 20 : ತ್ಯಾವರೆಕೊಪ್ಪದಲ್ಲಿರುವ ಶಿವಮೊಗ್ಗ ಮೃಗಾಲಯ ಮತ್ತು ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತರು.

Advertisement

ಡಾ. ಸಮೀಕ್ಷಾ ಅವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10.30ರ ಸುಮಾರಿಗೆ ಅವರು ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಬಳಿಕ ರಾತ್ರಿ 11.45ರ ಸುಮಾರಿಗೆ ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಅದರ ಆವರಣದ ಒಳಗೆ ಹೋದಾಗ, ನೀರಾನೆ ಹಠಾತ್ತಾಗಿ ಅವರ ಮೇಲೆ ದಾಳಿ ಮಾಡಿದೆ.

ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.