ಕಾರ್ಕಳ : ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತ್ನಿಯನ್ನು ಕೊಲೆಗೈದ ಪತಿ !

ಕಾರ್ಕಳ, ಫೆ. 03 : ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದ ಪತ್ನಿಯನ್ನು ಪತಿಯು ಮಾರಾಕಾಸ್ತ್ರದಿಂದ ಹಲ್ಲೆಮಾಡಿ ಕೊಲೆಗೈದ ಘಟನೆ ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆತ್ತು ಎಂಬಲ್ಲಿ ನಡೆದಿದೆ. ಆರೋಪಿ ಸುನೀಲ್ ಕುಮಾರ್ (44) ಎಂಬಾತನನ್ನು ಬಂಧಿಸಲಾಗಿದೆ.

Advertisement

ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆತ್ತು ನಿವಾಸಿ ಶ್ರೀಮತಿ ಗೀತಾ ಮತ್ತು ಅವರ ಗಂಡ ಸುನೀಲ್ ಕುಮಾರ್ ಇವರ ಮಧ್ಯೆ ಜ.27 ರಂದು ಬೆಳಗ್ಗೆ 9:50 ಗಂಟೆ ಸುಮಾರಿಗೆ ಗಲಾಟೆ ನಡೆದಿದ್ದು ಸುನೀಲ್ ಕುಮಾರ್ ಪತ್ನಿ ಗೀತಾ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ್ದ.

ಗಂಭೀರ ಗಾಯಗೊಂಡಿದ್ದ ಗೀತಾ ಇವರು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಇಲ್ಲಿ ತೀವೃ ನಿಗಾ ಘಟಕದಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿ ಸುನೀಲ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಗಾಯಾಳು ಗೀತಾ ಚಿಕಿತ್ಸೆಗೆ ಸ್ಪಂದಿಸದೇ ಫೆ.02 ರಂದು ಮೃತಪಟ್ಟಿದ್ದಾರೆ. ಠಾಣೆಯಲ್ಲಿ ಈಗಾಗಲೇ ದಾಖಲಾದ ಕೊಲೆ ಯತ್ನ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ಪ್ರಕರಣದ ಕಾನೂನು ಕಲಂ 109 ಅನ್ನು 103(1) ಭಾರತೀಯ ನ್ಯಾಯ ಸಂಹಿತೆ 2023 ನಂತೆ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.