ಉಡುಪಿ : ಆಯುಷ್ಮಾನ್ ಭಾರತ್ ಯೋಜನೆಯಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಣೆ – ಪ್ರಧಾನಿ ಕಚೇರಿಗೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್

Advertisement

ಉಡುಪಿ, ಸೆ. 10 : ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ತುರ್ತು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾದಾಗ, ಅಲ್ಲಿ ಚಿಕಿತ್ಸಾ ಸೌಲಭ್ಯವಿಲ್ಲವೆಂದು ಖಾಸಗಿ ಆಸ್ಪತ್ರೆಗೆ ರೆಫರಲ್ ಮಾಡುತ್ತಾರೆ. ಆದರೆ, ಖಾಸಗಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಅಡಿಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ, ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರಿಗೆ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಪತ್ರ ಬರೆದು ಆಗ್ರಹಿಸಿದ್ದಾರೆ.

Advertisement

ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲೇನಿದೆ ?

Advertisement

ನಾನು ಈ ಪತ್ರದ ಮೂಲಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಆಯುಷ್ಮಾನ್ ಭಾರತ್’ (PM-JAY) ಅಡಿಯಲ್ಲಿ ನಮಗೆ ಎದುರಾದ ಗಂಭೀರ ಸಮಸ್ಯೆಯನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ. ಆಯುಷ್ಮಾನ್ ಭಾರತ್ ಯೋಜನೆಯ ಅರ್ಹ ಫಲಾನುಭವಿಯಾಗಿದ್ದು, ಅದಕ್ಕೆ ಸಂಬಂಧಿಸಿದ ಕಾರ್ಡ್ ಅನ್ನು ಹೊಂದಿರುತ್ತಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಇಲ್ಲದೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಲು ಹೋದಾಗ, ಅಲ್ಲಿನ ಆಡಳಿತ ಮಂಡಳಿಯು ಈ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲು ನಿರಾಕರಿಸಿದೆ.

ನಡೆದ ಘಟನೆಗಳು :-
ತುರ್ತು ಚಿಕಿತ್ಸೆ ಬೇಕಾಗಿದ್ದಾ ಕಾರಣ ನಾವು ಮೊದಲು ಸರ್ಕಾರಿ ಆಸ್ಪತ್ರೆಗೆ ಹೋಗಿದ್ದೇವು. ಆದರೆ ನಮ್ಮನ್ನು ತುಂಬಾ ಸಮಯ ಕಾಯಿಸಿ ಕೊನೆಗೆ ನಮ್ಮಲ್ಲಿ ಇದಕ್ಕೆ ಚಿಕಿತ್ಸೆ ಲಭ್ಯವಿಲ್ಲ ಎಂದು ನಮ್ಮನ್ನು ಖಾಸಗಿ ಆಸ್ಪತ್ರೆಗೆ ಕಳಿಸುತ್ತಾರೆ. ಆ ಸಮಯದಲ್ಲಿ ಸರ್ಕಾರಿ ಆಸ್ಪತ್ರೆ ಅವರು ನಮಗೆ ರೆಫರಲ್ ಕೋಡ್ ಬರೆದು ಕೊಟ್ಟಿರುತಾರೆ. ಆದರೆ ಮಣಿಪಾಲ ಆಸ್ಪತ್ರೆಗೆ ಉನ್ನತ ಮಟ್ಟಕ್ಕೆ ಚಿಕಿತ್ಸೆ ಗೆ ಹೋದಾಗ ಹೋದ ಕೂಡಲೇ ತುರ್ತು ಸರ್ಜರಿ ಮಾಡಿ ನಿಮಗೆ ಈ ಕೋಡ್ ಬರುವುದಿಲ್ಲ, ಹಣ ಕಟ್ಟಬೇಕೆಂದು ಲಕ್ಷ ಗಟ್ಟಲೆ ಹಣ ಕಟ್ಟಿಸಿರುತ್ತಾರೆ. ಹಾಗಾದರೆ ಈ ಕೋಡ್ ಬರದಿದ್ದರೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಇಲ್ಲದಿದ್ದರೆ ಬಡವರು ಎಲ್ಲಿ ಹೋಗುವುದು ಎಂದು ವಿನಂತಿಸಿದ್ದಾರೆ..
ಆಸ್ಪತ್ರೆಯವರು ನೀಡಿದ ಕಾರಣಗಳು :-

  1. ಕೆಲವು ವೈದ್ಯರು ನಮ್ಮಲ್ಲಿ ಅಯುಷ್ಮಾನ್ ಬೆಡ್ ಖಾಲಿ ಇಲ್ಲ ಎಂದು ತಿಳಿಸಿದರು.
  2. ಈ ರೋಗಕ್ಕೆ ನಮ್ಮಲ್ಲಿ ಆ ಯೋಜನೆ ಅಡಿಯಲ್ಲಿ ಚಿಕಿತ್ಸೆ ಸಿಗುದಿಲ್ಲವೆಂದು ಹೇಳುತ್ತಾರೆ..
  3. ನಾವು ಆಯುಷ್ಮಾನ್ ಜ್ಞಾನ್ ನಲ್ಲಿ ದಾಖಲಾತಿಗೆ ಹೋದರೆ ಅಲ್ಲಿಯ ವೈದ್ಯರು ಹೋದ ದಿನವೇ ಆಯುಷ್ಮಾನ್ ನಲ್ಲಿ ತುರ್ತು ಚಿಕಿತ್ಸೆ ನೀಡದೆ ಹಣ ಕಟ್ಟಿಸುತ್ತಾರೆ.

ಬಡ ಜನರಿಗೆ ಉಚಿತ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆ ಸಿಗಲಿ ಎಂಬ ನಿಮ್ಮ ಆಶಯಕ್ಕೆ ಕೆಲವು ಆಸ್ಪತ್ರೆಗಳ ಇಂತಹ ಬೇಜವಾಬ್ದಾರಿತನ ಧಕ್ಕೆ ತರುತ್ತಿದೆ. ಇದರಿಂದಾಗಿ ತುರ್ತು ಪರಿಸ್ಥಿತಿಯಲ್ಲಿ ನಾವು ತೀವ್ರ ಆರ್ಥಿಕ ಮತ್ತು ಮಾನಸಿಕ ಸಂಕಷ್ಟವನ್ನು ಎದುರಿಸುವಂತಾಗಿದೆ. ಆದ್ದರಿಂದ, ದಯವಿಟ್ಟು ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಿ, ಸದರಿ ಆಸ್ಪತ್ರೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ಬಡವರಿಗೆ ನ್ಯಾಯ ಒದಗಿಸಿಕೊಡಬೇಕಾಗಿ ವಿನಂತಿಸಿಕೊಳ್ಳುತ್ತೇನೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ