ಬೆಂಗಳೂರು, ಜೂ. 23 : ರಾಷ್ಟ್ರಪಕ್ಷಿ ನವಿಲನ್ನು ಸೆರೆ ಹಿಡಿದು, ಹಲಾಲ್ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಅರಣ್ಯ ಸಂಚಾರಿ ದಳ ಬಂಧಿಸಿದೆ.
ಆರೋಪಿ ಸಾದೀಕ್ ಪಾಷ ಬಂಧಿತ ಆರೋಪಿ. ಚಿಕ್ಕಬಳ್ಳಾಪುರ ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಆರೋಪಿ ನವಿಲಿನ ಮಾಂಸ ಮಾರಾಟ ಮಾಡುತ್ತಿದ್ದ. ಬಂಧಿತನಿಂದ 3 ಕೆ.ಜಿ ನವಿಲಿನ ಮಾಂಸ, ನವಿಲಿನ ಮೊಟ್ಟೆ, ಮೂಳೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ನವಿಲನ್ನು ರಕ್ಷಣೆ ಮಾಡಲಾಗಿದೆ.
ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿ ವಿರುದ್ಧ ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಕಚೇರಿಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


