ನವದೆಹಲಿ : ಪಿಟ್ ಬುಲ್ ದಾಳಿಗೆ ಕಿವಿ ಕಳೆದುಕೊಂಡ ಬಾಲಕ – ನಾಯಿ ಮಾಲೀಕನ ಬಂಧನ

Advertisement

ನವದೆಹಲಿ : ಪಿಟ್ ಬುಲ್ ನಾಯಿಯೊಂದು ಬಾಲಕನ ಮೇಲೆ ದಾಳಿ ನಡೆಸಿದ್ದು, ದಾಳಿಯಿಂದಾಗಿ ಬಾಲಕ ತನ್ನ ಕಿವಿಯನ್ನೇ ಕಳೆದುಕೊಂಡಿರುವ ಘಟನೆ ವಾಯುವ್ಯ ದೆಹಲಿಯ ಪ್ರೇಮ್‌ನಗರ ಪ್ರದೇಶದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಯಿ ಮಾಲಕನನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಪ್ರಕರಣ ಸಂಬಂಧ ಪಿಟ್ ಬುಲ್ ನಾಯಿ ಮಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದ ವೇಳೆ ಪಿಟ್ ಬುಲ್ ನಾಯಿ ಇದ್ದಕ್ಕಿದ್ದಂತೆ ಪಕ್ಕದ ಮನೆಯೊಂದರಿಂದ ಹೊರಬಂದು ಹುಡುಗನ ಮೇಲೆ ದಾಳಿ ನಡೆಸಿದೆ. ನಾಯಿಯನ್ನು ವಾಕಿಂಗ್ ಕರೆದುಕೊಂಡು ಬಂದಿದ್ದ ಮಹಿಳೆ, ಪಿಟ್ ಬುಲ್ ಹಿಡಿದುಕೊಳ್ಳಲು ಪ್ರಯತ್ನಿಸಿದ್ದಾಳೆ. ಆದರೆ, ನಾಯಿ ಆಕೆ ಕೈಗೆ ಸಿಗದೇ ಬಾಲಕನ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಬಾಲಕ ತನ್ನ ಕಿವಿ ಕಳೆದುಕೊಂಡಿದ್ದಾನೆ. ತೀವ್ರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನಾಯಿ ಮಾಲೀಕ ರಾಜೇಶ್ ಪಾಲ್, ಅವರ ಮಗ ಸಚಿನ್ ಪಾಲ್ ಸುಮಾರು ಒಂದೂವರೆ ವರ್ಷಗಳ ಹಿಂದೆ ಪಿಟ್ ಬುಲ್ ಅನ್ನು ಮನೆಗೆ ಕರೆತಂದಿದ್ದರು. ಪ್ರಸ್ತುತ ಕೊಲೆ ಯತ್ನ ಪ್ರಕರಣದಲ್ಲಿ ರಾಜೇಶ್ ಪಾಲ್ ಅವರನ್ನು ಬಂಧಿಸಲಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ