ಬೆಳ್ತಂಗಡಿ, ಜು. 21 : ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಎಂದು ಗುರುತಿಸಲಾಗಿದೆ.
ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ ನಂತರ ಮಂಗಳೂರಿನ ಪೋಕ್ಸೋ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನವನ್ನು ವಿಧಿಸಿದೆ.


