ಕಡಬ : ಮನೆಗೆ ಅಕ್ರಮ ಪ್ರವೇಶಗೈದ ಪೊಲೀಸ್ ಪೇದೆಯನ್ನೇ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಕಡಬ, ಡಿ. 4 : ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದ ಆರೋಪದಲ್ಲಿ ಕಡಬ ಠಾಣಾ ಹೆಡ್‌ಕಾನ್ ಸ್ಟೇಬಲ್‌ನನ್ನು ಊರವರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮನೆಯವರು ಹಿಡಿಯುವ ಸಂದರ್ಭ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೊಬ್ಬರಿಗೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಈ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ನಡೆದಿದೆ.

Advertisement

ಕಡಬ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ರಾಜು ನಾಯ್ಕ ಆರೋಪಿ. ಈತ ತಡರಾತ್ರಿ ಕೊಯಿಲ ನಿವಾಸಿ ಹರೀಶ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಗೈದಿದ್ದು, ಈ ವೇಳೆ ಮನೆ ಮಂದಿ ಹಿಡಿದಿದ್ದಾರೆ ಎನ್ನಲಾಗಿದೆ. ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಚೇತನ್ ಎಂಬವರಿಗೆ ಹಲ್ಲೆಗೈದಿದ್ದಾರೆ. ಈ ಬಗ್ಗೆ ಕೊಯಿಲ ನಿವಾಸಿ ಬಾಬು ಗೌಡ ಎಂಬವರ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರಾಜು ನಾಯ್ಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.