ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಗೆ ಕಚ್ಚಿದ ವ್ಯಕ್ತಿ – ವೀಡಿಯೋ ವೈರಲ್

ಧರ್ಮಪುರಿ, ಡಿ. 08 : ಪ್ರತಿಭಟನೆಯ ಸಂದರ್ಭದಲ್ಲಿ ಕರ್ತವ್ಯನಿರತ ಪೊಲೀಸ್ ಅಧಿಕಾರಿಗೆ ಪ್ರತಿಭಟನಾ ನಿರತ ವ್ಯಕ್ತಿಯೋರ್ವ ಕಚ್ಚಿರುವ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ಟಿವಿಕೆ ಪಕ್ಷದ ಪ್ರತಿಭಟನೆಯ ವೇಳೆ ನಡೆದಿದೆ. ಈ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

Advertisement

ಹೊಸದಾಗಿ ಆರಂಭವಾದ ಮದ್ಯದ ಅಂಗಡಿಯನ್ನು ಮುಚ್ಚುವಂತೆ ಆಗ್ರಹಿಸಿ ಟಿವಿಕೆ ಪಕ್ಷದ ಕಾರ್ಯಕರ್ತರು ಧರ್ಮಪುರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅವರನ್ನು ತಡೆಯಲು ಮುಂದಾದ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ತೊಡಗಿದ್ದಾಗ, ಜೆಮಿನಿ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಪೊಲೀಸ್ ಅಧಿಕಾರಿಯ ಕೈಗೆ ಕಚ್ಚಿದ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಜೆಮಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕರ್ತವ್ಯನಿರತ ಪೊಲೀಸರಿಗೆ ಅಡ್ಡಿಪಡಿಸಿದ ಆರೋಪದಡಿ ಮತ್ತೂ ಮೂವರು ಪ್ರತಿಭಟನಾನಿರತರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.