ಬೆಳ್ತಂಗಡಿ : ಬೆಳ್ತಂಗಡಿ ವೃತ್ತ‌ ನಿರೀಕ್ಷಕರಾಗಿ ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ನೇಮಕ

ಬೆಳ್ತಂಗಡಿ : ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನಿವೃತ್ತಿ ಬಳಿಕ ಖಾಲಿ ಇದ್ದ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ಸ್ಥಾನಕ್ಕೆ ಉಪ್ಪಿನಂಗಡಿ ವೃತ್ತ ನಿರೀಕ್ಷಕ ಪೊಲೀಸ್ ಠಾಣೆಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆದೇಶವಾಗಿದ್ದ ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಅವರನ್ನು ನೇಮಕ ಮಾಡಿ ನ.21 ರಂದು ಆದೇಶ ಮಾಡಲಾಗಿದೆ.

Advertisement

ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಈ ಹಿಂದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಚಿಕ್ಕಮಗಳೂರು, ಕಾರ್ಕಳ, ಸುಳ್ಯ,ಸಂಪ್ಯ,ಪುತ್ತೂರು ಗ್ರಾಮಾಂತರ ಕಡೆ ಕರ್ತವ್ಯ ನಿರ್ವಹಿಸಿ ಇನ್ಸ್‌ಪೆಕ್ಟರ್ ಆಗಿ ಭಡ್ತಿ ಹೊಂದಿ ಶೃಂಗೇರಿ,ಉಪ್ಪಿನಂಗಡಿ ವೃತ್ತ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದರು. ಇದೀಗ, ಬೆಳ್ತಂಗಡಿ ವೃತ್ತ‌ ನಿರೀಕ್ಷಕರಾಗಿ ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ.

ಇನ್ಸ್‌ಪೆಕ್ಟರ್ ರವಿ‌.ಬಿ.ಎಸ್ ಇವರ ಉತ್ತಮ ಕರ್ತವ್ಯ ನಿರ್ವಹಣೆ ಬಗ್ಗೆ ಮುಖ್ಯಮಂತ್ರಿ ಪದಕ, ರಾಷ್ಟ್ರಪತಿ ಪದಕ ಸೇರಿದಂತೆ ಪೊಲೀಸ್ ಇಲಾಖೆಯಲ್ಲಿ ಕೂಡ ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.