ಮಂಗಳೂರು : ಯುವತಿಗೆ ವಂಚನೆ ಪ್ರಕರಣ – ಪ್ರತಿಭಾ ಕುಳಾಯಿಗೆ ಪೊಲೀಸ್ ನೋಟೀಸ್ ಜಾರಿ

Advertisement

ಮಂಗಳೂರು, ಫೆ. 04 : ಪುತ್ತೂರಿನ ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸಿ, ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕ ಮದುವೆಯಾಗದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಭಾ ಕುಳಾಯಿಗೆ ಪುತ್ತೂರು ನಗರ ಠಾಣೆಯ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಪುತ್ತೂರು ನಿವಾಸಿ, ಶ್ರೀಕೃಷ್ಣ ರಾವ್ ಎಂಬಾತ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಸಂತ್ರಸ್ತೆಗೆ ಬೆಂಬಲವಾಗಿದ್ದ ಪ್ರತಿಭಾ ಕುಳಾಯಿಗೆ ಪೊಲೀಸರು ನೋಟೀಸ್ ಜಾರಿ ಮಾಡಿದೆ. ಆರೋಪಿ ಶ್ರೀಕೃಷ್ಣ ರಾವ್ ಎಂಬಾತನ ತಂದೆ ಪಿ.ಜಿ. ಜಗನ್ನಿವಾಸ ರಾವ್ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನೀಡಿದ ದೂರಿನ ಮೇರೆಗೆ, ಅರ್ಜಿಯನ್ನು ಅಧೀಕ್ಷರು ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ. ಹೀಗಾಗಿ, ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ’ ಎಂದು ತಿಳಿದು ಬಂದಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ