ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು : ಹರೀಶ್ ಪೂಂಜ

ಬೆಳ್ತಂಗಡಿ, ಜ.07 : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಂಪರ್ಕಕ್ಕೆ ಅನುಕೂಲ ಕಲ್ಪಿಸುವಂತಹ ಸ್ಥಳಗಳಲ್ಲಿ ಕಾಲುಸಂಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ವಿಶೇಷ ಮುತುವರ್ಜಿ ವಹಿಸಿ, ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ಈ ಬಾರಿ ತಲಾ ರೂ.25.00 ಲಕ್ಷ ವೆಚ್ಚದಲ್ಲಿ ಒಟ್ಟು ನಾಲ್ಕು ಕಾಮಗಾರಿಗಳು ಅನುಮೋದನೆಗೊಂಡಿರುತ್ತದೆ ಎಂದು ಶಾಸಕ ಹರೀಶ್ ಪೂಂಜಾ ಮಾಹಿತಿ ನೀಡಿದ್ದಾರೆ.

Advertisement

ಮಲವಂತಿಗೆ ಗ್ರಾಮದ ಕುಮೇರು ಪರಿಶಿಷ್ಟ ಪಂಗಡ ಕಾಲೊನಿ ರಸ್ತೆಯಲ್ಲಿ ಕಾಲುಸಂಕ, ನೆರಿಯ ಗ್ರಾಮದ ಪುಲ್ಲಾಜೆ ಎಂಬಲ್ಲಿ ಕಾಲುಸಂಕ, ಸವಣಾಲು ಗ್ರಾಮದ ಕೋಡಿಮುಗೇರು ಎಂಬಲ್ಲಿ ಕಾಲುಸಂಕ, ಕುಕ್ಕೇಡಿ ಗ್ರಾಮದ ಕಾಜಾಲ ಎಂಬಲ್ಲಿ ಕಾಲುಸಂಕ ನಿರ್ಮಾಣಕ್ಕೆ ಅನುದಾನ ಮುಂಜೂರುಗೊಂಡಿದೆ. ಈ ಎಲ್ಲಾ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಕಲ್ಪಿಸಲಿದ್ದು ಈ ಕಾರ್ಯಕ್ಕೆ ರೂ.1.00ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಏಕಾಏಕಿ ಅಸ್ವಸ್ಥಗೊಂಡ ಪ್ರಯಾಣಿಕ – ಬಸ್ ಅನ್ನು ಆಸ್ಪತ್ರೆಗೆ ಸಾಗಿಸಿ, ಮಾನವೀಯತೆ ಮೆರೆದ ಬಸ್ ಸಿಬ್ಬಂದಿ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೇರಳ ಇನ್ನು ಮುಂದೆ “ಕೇರಳಂ” – ಮರುನಾಮಕರಣಕ್ಕೆ ಕೇಂದ್ರ ಸಚಿವ ಸಂಪುಟ ಸಜ್ಜು !?

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

⚠️ Contents are protected on this website.