ಬೆಳ್ತಂಗಡಿ : ಅರಣ್ಯದಂಚಿನ ಜನರಿಗೆ ಮೂಲಭೂತ ಸೌಕರ್ಯಕ್ಕೆ ಶಾಸಕ ಹರೀಶ್ ಪೂಂಜಾ ಮನವಿ

ಬೆಳ್ತಂಗಡಿ, ಜೂ. 13 : ಅರಣ್ಯ, ಅರಣ್ಯದಂಚಿನ ಬುಡಕಟ್ಟು ಸಮುದಾಯದ ಕಾಲೋನಿಗಳ ಮೂಲಭೂತ ಸೌಕರ್ಯ, ವಿದ್ಯುತ್ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜಾ ಮನವಿ ಸಲ್ಲಿಸಿದ್ದಾರೆ.

Advertisement

ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ನಾರಾವಿ, ಕುತ್ಲೂರು, ಸುಲ್ಕೇರಿ, ಸವಣಾಲು ,ನಡ, ಮಲವಂತಿಗೆ, ನವೂರು ಗ್ರಾಮದ ಮಲೆಕುಡಿಯ ಕಾಲೋನಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪರಿವೇಶ್ ಪೋರ್ಟಲ್ ನಲ್ಲಿ ಸಲ್ಲಿಸಿರುವ ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಸರ್ಕಾರದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಂಜುಮ್ ಪರ್ವೇಜ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಹಾಗೂ ರಾಜ್ಯಾದ್ಯಂತ ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವಾಗ ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3(2) ಅಡಿಯಲ್ಲಿ ಭೂ ಪರಿವರ್ತನೆ ಮಾಡಿ , ಫಾರೆಸ್ಟ್ ಕ್ಲಿಯರೆನ್ಸ್ ಮತ್ತು ವನ್ಯ ಮಂಡಳಿಯ ಅನುಮತಿ ಇಲ್ಲದೆ DFO ಹಂತದಲ್ಲಿ ಅನುಮತಿ ನೀಡಲು ಕೇಂದ್ರ ಸರ್ಕಾರದ ಆದೇಶದಂತೆ ಸೂಕ್ತ ಕ್ರಮ ಕೈಗೊಳ್ಳಲು ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯವರಾದ ಕನಗವಲ್ಲಿಯ ವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಲೆಕುಡಿಯ ಸಮುದಾಯದ ಮುಖಂಡರಾದ ಹರೀಶ್ ಎಳನೀರು ಅವರು ಉಪಸ್ಥಿತರಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೊಳಕೆಯಲ್ಲಿ ಕಾರು – ಸ್ಕೂಟರ್ ಡಿಕ್ಕಿ –
ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

⚠️ Contents are protected on this website.