ಸುಳ್ಯ : ಶಾಸಕಿ ಭಗಿರಥಿ ಮುರುಳ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ – ಆರೋಪಿಯ ಬಂಧನಕ್ಕೆ ಆಗ್ರಹ

ಸುಳ್ಯ, ಜ. 07 : ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿರುವ ಭಗಿರಥಿ ಮುರುಳ್ಯರ ವಿರುದ್ಧ ವ್ಯಕ್ತಿಯೋರ್ವ ನಿಂದನಾತ್ಮಕ ಪೋಸ್ಟ್ ಹಾಕಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಶಾಸಕಿಗೆ Billava Sandesh ಎಂಬ ಹೆಸರಿನ ಫೇಸ್ ಬುಕ್ ಖಾತೆಯ ಪೋಸ್ಟ್ ನಲ್ಲಿ “ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದುಕೊಂಡಿರುವುದು ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಜನತೆ ಆಗ್ರಹಿಸಿದ್ದಾರೆ.

Advertisement

Billava Sandesh ಎಂಬ ಹೆಸರಿನ ಫೇಸ್ ಬುಕ್ ಖಾತೆಯ ಪೋಸ್ಟ್ ನಲ್ಲಿ ” ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಇವರು ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೆ ಇಂದು ಎಲ್ಲರನ್ನೂ ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯನ್ನು ಭರಿಸುವ ಶಕ್ತಿ ಬ್ಲೂಜೆಪಿ ಪಕ್ಷದ ಕಾರ್ಯಕರ್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ.” ಎಂದು ಬರೆದುಕೊಂಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಆರೋಪಿಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ಕೇಳಿ ಬರುತ್ತಿದ್ದು, ಜಿಲ್ಲೆಯ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ತಕ್ಷಣ ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ, ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಅನ್ನಭಾಗ್ಯದಂತೆ ‘ಕನ್ಯಾ ಭಾಗ್ಯ’ ನೀಡಿ – ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಕರಿಂದ ವಿಚಿತ್ರ ಮನವಿ!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಹರೈನ್ ನಿಂದ ಊರಿಗೆ ಬಂದು ಗೆಳೆಯರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಎದೆನೋವು – ಹೃದಯಾಘಾತದಿಂದ ವ್ಯಕ್ತಿ ಸಾವು !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಜಾರ್ಖಂಡ್‌ : 1 ಕೋಟಿ ಬಹುಮಾನ ಹೊಂದಿದ್ದ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಅರೆಸ್ಟ್ !

⚠️ Contents are protected on this website.