ಬೆಳ್ತಂಗಡಿ : ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲೆಂದು ಕೇರಳದ ಪ್ರಸಿದ್ಧ ದೇವಸ್ಥಾನ ಮಡಾಯಿ ಕಾವು ತಿರುವರ್ಕಾಡು ಭಗವತಿ ದೇವಸ್ಥಾನದಲ್ಲಿ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದ್ದಾರೆ.
ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ ಇಂದು ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿಯೂ ಕೂಡಾ ಸಿಎಂ ಖುರ್ಚಿಗಾಗಿ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ಮಧ್ಯೆ ತೀವ್ರ ಪೈಪೋಟಿಯು ನಡೆಯುತ್ತಿದೆ. ಇದೀಗ ಬೆಳ್ತಂಗಡಿ ಯುವ ಕಾಂಗ್ರೆಸ್ ಉಪಾಧಕ್ಷ ವಿಶೇಷ ಪೂಜೆ ಸಲ್ಲಿಸಿ, ಡಿಕೆಶಿ ಸಿಎಂ ಆಗಬೇಕೆಂದು ಪ್ರಾರ್ಥಿಸಿದ್ದಾರೆ.

