ಬೆಂಗಳೂರು : ಕ್ಲಾಸ್ ರೂಂ’ನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ – ಪ್ರಾಧ್ಯಪಕ ಅಬ್ದುಲ್ ಮೇಲೆ ಮನಸೋ ಇಚ್ಛೆ ದಾಳಿ ನಡೆಸಿದ ವಿದ್ಯಾರ್ಥಿಗಳು ! | VIDEO |

ಬೆಂಗಳೂರು, ಮಾ. 26 : ಕಾಲೇಜಿನಲ್ಲೇ ವಿದ್ಯಾರ್ಥಿನಿಯೊಬ್ಬರಿಗೆ ಪ್ರಾಧ್ಯಾಪಕ ಪ್ರಪೋಸ್​ ಮಾಡಿದ್ದ ಹಿನ್ನೆಲೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಕ್ಯಾಂಪಸ್‌ವೊಂದು ರಣರಂಗವಾಗಿ ಮಾರ್ಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರಿನಲ್ಲಿ ನಡೆದಿದೆ. ​

Advertisement

ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ನೆಲಮಂಗಲ ತಾಲೂಕಿನ ಟಿ.ಬೇಗೂರಿನ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಪ್ರಾಧ್ಯಪಕ ಅಬ್ದುಲ್ ಪ್ರಪೋಸ್ ಮಾಡುವ ವಿಡಿಯೋ ಹಾಗೂ ಅವರ​ ಮೇಲೆ ವಿದ್ಯಾರ್ಥಿಗಳ ಗುಂಪು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ವಿಡಿಯೋ ವೈರಲ್​ ಆಗಿದೆ.

ಪ್ರಾಧ್ಯಾಪಕನಿಂದ ಅಸಭ್ಯ ವರ್ತನೆ

ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಅಬ್ದುಲ್ ಕ್ಲಾಸ್​ ರೂಂನಲ್ಲಿ ಸ್ಟೂಡೆಂಟ್ಸ್​ ಮುಂದೆಯೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್​​ ಮಾಡಿದ್ದಾರೆ ಎನ್ನಲಾಗಿದೆ. ಪ್ರಾಧ್ಯಾಪಕನ ಈ ಅಸಭ್ಯ ವರ್ತನೆಯಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿ ಚಪ್ಪಲಿಯಿಂದ ಕೆನ್ನೆಗೆ ಬಾರಿಸಿದ್ದಾಳೆ.

ಚಪ್ಪಲಿ ಏಟು, ಕಾಲಿನಿಂದ ಥಳಿತ

ಪ್ರಾಧ್ಯಾಪಕನ ನಡೆ ಕಂಡು ಆಕ್ರೋಶಗೊಂಡ ವಿದ್ಯಾರ್ಥಿಗಳ ಗುಂಪು ರೊಚ್ಚಿಗೆದ್ದು, ಪ್ರಾಧ್ಯಾಪಕನಿಗೆ ಕಾಲಿನಿಂದ ಹೊದ್ದು, ಕ್ಯಾಂಪಸ್​ನಲ್ಲೇ ಅಟ್ಟಾಡಿಸಿ ದಾಳಿ ನಡೆಸಿದ್ದಾರೆ. ಕೊನೆಗೆ ಕಾಲೇಜಿನ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಪರಿಸ್ಥಿತಿ ಹದಗೆಡುತ್ತಲೇ ಪ್ರಾಧ್ಯಾಪಕ ಅಬ್ದುಲ್ ಕಾಲೇಜು ಕ್ಯಾಂಪಸ್‌ನಿಂದ ತಪ್ಪಿಸಿಕೊಳ್ಳಲು ತನ್ನ ಕಾರಿನತ್ತ ಓಡಿದ್ದಾನೆ. ಅಲ್ಲಿಯೂ ಆತನನ್ನು ಬಿಡದ ವಿದ್ಯಾರ್ಥಿಗಳು, ಅಟ್ಟಾಡಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕೊನೆಗೆ ವಿದ್ಯಾರ್ಥಿಗಳ ಹೊಡೆತಕ್ಕೆ ಬೆದರಿದ ಪ್ರಾಧ್ಯಾಪಕ ಸ್ಥಳದಿಂದ ಓಡಿ ಹೋಗಿದ್ದಾನೆ ಎನ್ನುವುದು ಕೇಳಿಬಂದಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹೈಡ್ರಾಮಾ ನಡೆದಿದ್ದು, ಪೊಲೀಸರಿಂದ ದೂರು ದಾಖಲಾಗುವ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.