ಮೈಸೂರು, ಆ. 07 : ಕರ್ನಾಟಕದ ರಾಜಕೀಯ ಹೊಲಸು ಮಾಡಿದ್ದೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಮಗನನ್ನು ಮಂತ್ರಿ ಮಾಡಲು ಮಲ್ಲಿಕಾರ್ಜುನ ಖರ್ಗೆ ಆ ಭಾಗದ ಎಲ್ಲಾ ಕಾಂಗ್ರೆಸ್ ನಾಯಕರ ರಾಜಕೀಯ ಮುಗಿಸಿದರು. ಮೈಸೂರು ಭಾಗದಲ್ಲಿ ಮಗನನ್ನು ಲೀಡರ್ ಮಾಡಲು ಸಿದ್ದರಾಮಯ್ಯ ಎಲ್ಲಾ ಕಾಂಗ್ರೆಸ್ ನಾಯಕರ ರಾಜಕೀಯ ಮುಗಿಸಿದ್ದಾರೆ.
ಡಾ. ಮಹದೇವಪ್ಪ, ಕೆ.ವೆಂಕಟೇಶ್ ಎಲ್ಲರನ್ನು ಸಿದ್ದರಾಮಯ್ಯ ಮೂಲೆ ಗುಂಪು ಮಾಡಿದ್ದಾರೆ. ಸಭ್ಯ ರಾಜಕಾರಣಿ ತನ್ವೀರ್ ಸೇಠ್‌ಗೆ ಅವಕಾಶ ತಪ್ಪಿಸಿದ್ದಾರೆ. ದಲಿತರ ಧ್ವನಿ ಆಗಿರುವ ಮಹದೇವಪ್ಪರ ಸ್ನೇಹವನ್ನೆ ಸಿದ್ದರಾಮಯ್ಯ ಮರೆತು ಬಿಟ್ಟರು. ತನ್ನ ಮಗನ ಮೇಲೆ ಮಾತ್ರ ಕಿರೀಟ ಇರಬೇಕು ಅಂತಾ ಎಲ್ಲಾ ನಾಯಕರ ರಾಜಕೀಯ ಮುಗಿಸಿದ್ದಾರೆ ಎಂದು ಟೀಕಿಸಿದರು.
ಮಹದೇವಪ್ಪ, ವೆಂಕಟೇಶ್, ಸಿದ್ದರಾಮಯ್ಯಗೆ ಸದಾ ಜೊತೆ ಇದ್ದರು. ಸ್ನೇಹಿತರ ರಾಜಕೀಯವನ್ನೆ ಸಿದ್ದರಾಮಯ್ಯ ಮುಗಿಸಿದರು. ಭ್ರಷ್ಟಾಚಾರ ಮಾಡಿ 14 ಸೈಟ್ ಪಡೆದು ಭ್ರಷ್ಟಾಚಾರ ಬಗ್ಗೆ ಮಾತಾಡುವ ನೈತಿಕತೆಯನ್ನು ಸಿದ್ದರಾಮಯ್ಯ ಕಳೆದು ಕೊಂಡಿದ್ದರು. ಈಗ ಮಗನಿಗಾಗಿ ಎಲ್ಲರ ರಾಜಕೀಯ ಮುಗಿಸಿ ಕುಟುಂಬ ರಾಜಕೀಯದ ಬಗ್ಗೆ ಟೀಕೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಟಾಂಗ್ ಕೊಟ್ಟರು.




