ಬೆಳ್ತಂಗಡಿ : ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಉರುವಾಲು, ಡಿ. 23 : ಮಹಮ್ಮಾಯಿ ಮರಾಠಿ ಸೇವಾ ಸಂಘ, ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ, ಉರುವಾಲು ಇದರ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆಯು ಇಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕರಾದ ಶ್ರೀ ಹರೀಶ್ ಪೂಂಜಾ’ರವರು ವಹಿಸಿದ್ದರು.

Advertisement

ಸಭೆಯಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ, ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ನಾನು ಶ್ರಮಿಸಿತ್ತೇನೆ. ದೇವಸ್ಥಾನದ ವಠಾರದಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ 02 ಲಕ್ಷ ರೂ., ದೇವಸ್ಥಾನದ ಮುಂಭಾಗದಲ್ಲಿ ಇಂಟರ್ ಲಾಕ್ ಅಳವಡಿಕೆಗೆ 03 ಲಕ್ಷ ರೂ. ಅನುದಾನ ಹಾಗೂ ದೇವಸ್ಥಾನದ ಗೋಡೆಗೆ ಸುಂದರ ಚಿತ್ರ ನಿರ್ಮಾಣಕ್ಕೆ ಹಾಗೂ ಅನ್ನದಾನ ಸೇವೆಗಾಗಿ ವೈಯಕ್ತಿಕವಾಗಿ 50 ಸಾವಿರ ರೂ. ನೀಡುವುದಾಗಿ ಭರವಸೆ ನೀಡಿದರು. ಅಲ್ಲದೆ, ಪ್ರತಿಷ್ಠೋತ್ಸವ ನಡೆಸುವ ಕುರಿತಾಗಿ ಸಲಹೆ ಸೂಚನೆಗಳನ್ನಿತ್ತರು. ಇನ್ನು, ಸಭೆಯಲ್ಲಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜದ ಮೊಕ್ತೇಸರರಾದ ಶ್ರೀ ಯೋಗೀಶ್ ಕುಮಾರ್ ಕಡ್ತಿಲ ಮತ್ತು ನ್ಯಾಯವಾದಿಗಳಾಗಿರುವ ಶ್ರೀ ಸುಬ್ರಹ್ಮಣ್ಯ ಅಗರ್ತ ಇವರು ಸೂಕ್ತ ಮಾರ್ಗದರ್ಶನವನ್ನು ನೀಡಿದರು.

ಸಭೆಯಲ್ಲಿ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ, ಉರುವಾಲು ಇದರ ಸಲಹಾ ಸಮಿತಿ ಸದಸ್ಯರು ಹಾಗೂ ಮುಂಡಾಜೆ ಸಿಎ ಬ್ಯಾಂಕ್ ನಿರ್ದೇಶಕರಾದ ಶ್ರೀ ಚೆನ್ನಕೇಶವ, ಶ್ರೀ ಮಹಮ್ಮಾಯಿ ದೇವಸ್ಥಾನ ಅಧ್ಯಕ್ಷರಾದ ಶ್ರೀ ಸೀತಾರಾಂ ನಾಯ್ಕ್ ಅರ್ಬಿ, ಮಹಮ್ಮಾಯಿ ಮರಾಠಿ ಸೇವಾ ಸಂಘ ಟ್ರಸ್ಟ್ ಅಧ್ಯಕ್ಷರಾದ ಶ್ರೀ ವಿನೋದ್ ಜಲದುರ್ಗಾ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಹಾಗೂ ವನಶಾಸ್ತಾರ ದೇವಸ್ಥಾನದ ಅಧ್ಯಕ್ಷರಾದ ಶ್ರೀ ದಾಸಪ್ಪ ಗೌಡಕೊರಿಂಜ, ಶ್ರೀ ಮಹಮ್ಮಾಯಿ ದೇವಸ್ಥಾನ ತಣ್ಣೀರುಪಂತ ಇದರ ಅಧ್ಯಕ್ಷರಾದ ಶ್ರೀ ಗಂಗಯ್ಯ ನಾಯ್ಕ, ಸಿಎ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಜಯಾನಂದ ಕಲ್ಲಾಪು, ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶ್ರೀಮತಿ ಜಲಜಾಕ್ಷಿ, ಕಣಿಯೂರು ಗ್ರಾ.ಪಂ. ಸದಸ್ಯರಾದ ಶ್ರೀಮತಿ ಸುಮತಿ, ಶ್ರೀ ರಾಮ ಶಾಲೆ ರಾಮನಗರ ಉಪ್ಪಿನಂಗಡಿ ಅಧ್ಯಕ್ಷರಾದ ಶ್ರೀ ಸುನಿಲ್ ಅನವು, ಕಣಿಯೂರು ಗ್ರಾ.ಪಂ. ಸದಸ್ಯರಾದ ಶ್ರೀ ಕೃಷ್ಣಪ್ರಸಾದ್, ಗಣೇಶ್ ಭಜನಾ ಮಂದಿರ ಕುಪ್ಪೆಟ್ಟಿ ಟ್ರಸ್ಟ್ ಅಧ್ಯಕ್ಷರಾದ ಶ್ರೀ ರೋಹಿತ್ ಶೆಟ್ಟಿ ಪುಯಿಲ್, ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಸುರೇಶ್ ಹೆಚ್.ಎಲ್., ಭಗವಧ್ಭಕ್ತರು ಹಾಗೂ ಊರಿನವರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.