ಚಾಕೊಲೇಟ್ ಆಮಿಷವೊಡ್ಡಿ ಬಾಲಕಿಯ ಅತ್ಯಾಚಾರಗೈದು ಭೀಕರ ಕೊಲೆ : ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

Advertisement

ನವದೆಹಲಿ, ಡಿ. 15 : ಚಾಕೊಲೇಟ್ ನೀಡುವ ಆಮಿಷವೊಡ್ಡಿ ಎರಡು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಕೊಲೆ ಮಾಡಿ ಜೈಲು ಶಿಕ್ಷೆಗೊಳಗಾದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ್ದಾರೆ. ಈ ಮೂಲಕ ಅತ್ಯಾಚಾರ ಆರೋಪಿಗಳಿಗೆ ಯಾವುದೇ ಕ್ಷಮಾದಾನವಿಲ್ಲವೆಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

Advertisement

ಮಹಾರಾಷ್ಟ್ರದ ಜಲ್ನಾ ನಗರದ ಇಂದಿರಾನಗರ ಪ್ರದೇಶದಲ್ಲಿ 2012ರ ಮಾರ್ಚ್ 6 ರಂದು ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ, ಕೊಲೆ ಮಾಡಲಾಗಿತ್ತು. 2015ರ ಸೆಪ್ಟೆಂಬರ್ 16 ರಂದು ವಿಚಾರಣಾ ನ್ಯಾಯಾಲಯ ಆರೋಪಿ ರವಿ ಅಶೋಕ್ ಘುಮಾರನನ್ನು ಅಪರಾಧಿ ಎಂದು ಘೋಷಿಸಿ ಮರಣ ದಂಡನೆ ವಿಧಿಸಿತ್ತು. ಅಪರಾಧಿ ರವಿ ಅಶೋಕ್ ಘುಮಾರಿಗೆ ವಿಧಿಸಿದ್ದ ಮರಣದಂಡನೆಯನ್ನು 2016ರ ಜನವರಿಯಲ್ಲಿ ಬಾಂಬೆ ಹೈಕೋರ್ಟ್ ಈ ಆದೇಶವನ್ನು ಎತ್ತಿಹಿಡಿದಿತ್ತು. ಬಳಿಕ 2019ರ ಅಕ್ಟೋಬರ್ 3 ರಂದು ಈ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿತ್ತು.

Advertisement

ಎರಡು ವರ್ಷದ ಮಗುವಿನ ಮೇಲೆ ಹೀನಕೃತ್ಯ ಆರೋಪಿಯ ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆ. ಅಲ್ಲದೇ ಕ್ರೌರ್ಯದ ಭಯಾನಕ ಕಥೆ ಪ್ರದರ್ಶಿಸುತ್ತದೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ (ಭಾರತದ ಈಗಿನ ಸಿಜೆಐ) ಅವರನ್ನೊಳಗೊಂಡ ತ್ರಿಸದಸ್ಯ ಪೀಠ ತಿಳಿಸಿತ್ತು. 2022ರ ಜುಲೈ 25 ರಂದು ಅಧಿಕಾರ ವಹಿಸಿಕೊಂಡ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ ಮೂರನೇ ಕ್ಷಮದಾನ ಅರ್ಜಿ ಇದಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ